ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕ ಬ್ಯಾಲದ ಕೆರೆ ಗ್ರಾಮದಲ್ಲಿ ನಡೆದ ಘಟನೆ ಇದಾಗಿದ್ದು ಜಗದೀಶ್ ಎಂಬುವರಿಗೆ ಈ ಕೊಬ್ಬರಿ ಗೋದಾಮು ಸೇರಿದ್ದು, ಗ್ರಾಮದ ಹೊರವಲಯದಲ್ಲಿತ್ತು.ಕೊಬ್ಬರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಗೋದಾಮಿನಲ್ದಿದ್ದ ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪಿಐ ಮಧು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ