ಲಕ್ನೋ 2012ರ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಾಬೀತವಾಗಿದೆ. ಸಂಸದ ಶಾಸಕ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಂಬರೀಶ್ ಕುಮಾರ್ ಶ್ರೀ ವಾಸ್ತವ ರವರು ಈ ಶಿಕ್ಷೆಯನ್ನು ಪ್ರಕಟಿಸಿದ್ದಾರೆ. ಆದರೆ ಶಿಕ್ಷೆ ಪ್ರಕಟವಾದ ಕೆಲವೇ ದಿನಗಳಲ್ಲಿ ನ್ಯಾಯಾಲಯ ಅವರಿಗೆ ಮಧ್ಯಾಂತರ ಜಾಮೀನು ನೀಡಿದೆ.
ಈ ಬಗ್ಗೆ ವಿರೋಧ ಪಕ್ಷಗಳು ದೂರು ನೀಡಿದ್ದು, ನಂತರ ಪ್ರಕರಣ ದಾಖಲಾಗಿದೆ.ಸ್ಟಾಟಿಕ್ ಸರ್ವೆಲೆನ್ಸ್ ಮ್ಯಾಜಿಸ್ಟ್ರೇಟ್ ಮುಖೇಶ್ ಚತುರ್ವೇದಿ ಅವರು 17 ಫೆಬ್ರವರಿ 2012 ರಂದು ಕೃಷ್ಣ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿಕ್ಷೆ ವಿಧಿಸುವ ವೇಳೆ ಸಂಸದೆ ರೀಟಾ ಬಹುಗುಣ ಜೋಶಿ ನ್ಯಾಯಾಲಯದಲ್ಲಿ ನಡೆದಿದೆ. ತಕ್ಷಣ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಫೆಬ್ರವರಿ 20 2021 ರಂದು, ನ್ಯಾಯಾಲಯವು ಜೋಶಿ ವಿರುದ್ಧ ಆರೋಪಗಳನ್ನು ರೂಪಿಸಿತ್ತು. ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್ 126 ರ ಅಡಿಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಲಾಯಿತು. ಪ್ರಯಾಗರಾಜ್ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರಿಗೆ ಲಕ್ನೋ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಇದರ ಜೊತೆಗೆ ಒಂದು ಸಾವಿರ ದಂಡ ವಿಧಿಸಲಾಗಿದೆ.