ಚಿತ್ರದುರ್ಗ : ಬೆಂಗಳೂರಿನಿಂದ ಪೂನಾ ಕಡೆಗೆ ಚಲಿಸುತ್ತಿರುವ ಮಹಾರಾಷ್ಟ್ರ ಮೂಲದ ಕಾರು ಎಂ ಹೆಚ್ 12 ಟಿ ಎಸ್ 5846 ಗಾಡಿಯ ಕಾತ್ರಾಳ್ ಬಳ್ಳಕಟ್ಟೆಯ ಬಳಿ ಕಾರಿನ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎಡಗಡೆ ಇದ್ದ ಬ್ಯಾರಿಕೆಟ್ಗೆ ಬ್ಯಾರಿಕೆಟ್ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.
ಕಾರಿನಲ್ಲಿ ಮೂರು ಜನ ಪ್ರಯಾಣಿಸುತ್ತಿದ್ದು, ಅದರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿದ್ದರು.
ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಅಪಘಾತವಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಈ ಘಟನೆಯು ರಾಷ್ಟ್ರೀಯ ಹೆದ್ದಾರಿ 4 ರ ಕಾತ್ರಾಳ್ ಬಳ್ಳಕಟ್ಟೆಯ ಬಳಿ ಸಂಭವಿಸಿದೆ. ಇದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಭರಮಸಾಗರ ಹೋಬಳಿಯ ವ್ಯಾಪ್ತಿಗೆ ಸೇರಿದ್ದು.
ಭರಮಸಾಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ . ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ವರಿಷ್ಠ ಅಧಿಕಾರಿಗಳು, ಡಿವೈಎಸ್ಪಿ, ಮತ್ತು ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.