ಶ್ರೀನಗರ : ಆರೋಪಿ ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಪಂಜಾಬ್ ಮೂಲದ ವ್ಯಕ್ತಿಯನ್ನು ಭಯೋತ್ಪಾದಕರು ಕೊಂದಿದ್ದಾರೆಂದು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಪಂಜಾಬಿನ ಅಮೃತಸಾರ ಮೂಲದ ಅಮೃತ್ ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಶಾಹಿದ್ ಗುಂಜ್ ಪ್ರದೇಶದಲ್ಲಿ ಸೈನಿಕರಿಗೂ ಮತ್ತು ಭಯೋತ್ಪಾದಕರ ನಡುವೆ ನಡೆದಿದ್ದು, ಈ ದಾಳಿಯ ವೇಳೆ ಅಮೃತ್ ಪಾಲ್ ಸಿಂಗ್ ಅವರಿಗೆ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಅಮರ್ ಪಾಲ್ ಸಿಂಗ್ ಅವರು ಮರಣ ಹೊಂದಿದರು. ಮತ್ತೊಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ ಹಾಗೂ ಘಟನಾ ಸ್ಥಳಕ್ಕೆ ಬಿಗಿ ಭದ್ರತೆಯನ್ನು ಮಾಡಿರುವುದಾಗಿ ತಿಳಿದು ಬಂದಿದೆ.