ಚಿತ್ರದುರ್ಗ : ಖಾಸಗಿ ಬಸ್ ನಲ್ಲಿ ಪ್ರಯಾಣಿಕರು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ದಿಂಡದವರ ಮಾರ್ಗದಿಂದ ಹಿರಿಯೂರು ಮಾರ್ಗವಾಗಿ ಬರುವ ಖಾಸಗಿ ಬಸ್ ನಲ್ಲಿ ಈ ಘಟನೆ ನಡೆದಿದ್ದು ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದೆ. ಸಣ್ಣ ವಿಚಾರಕ್ಕೆ ವಿದ್ಯಾರ್ಥಿ ಹಾಗೂ ಪ್ರಯಾಣಿಕರ ಮಧ್ಯೆ ಜಗಳವಾಗಿದ್ದು ಈ ಸಂಬಂಧ ವಿದ್ಯಾರ್ಥಿ ಶಿವರಾಜ್ 17 ವರ್ಷ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಆದಿವಾಲ ಬೋವಿ ಸಮುದಾಯ ಕಾಲೋನಿಯ ತಿರುಮಲ ನಗರದ ಯೋಗಿ ಮತ್ತು ಸುಧಾಕರ್ ಹಾಗೂ ಇವರ ಸ್ನೇಹಿತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನಡು ರಸ್ತೆಯಲ್ಲಿ ಖಾಸಗಿ ಬಸ್ ನಿಲ್ಲಿಸಿ, ವಿದ್ಯಾರ್ಥಿ ಶಿವರಾಜ್ ಮೇಲೆ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದರು.