ಬೆಂಗಳೂರು : ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಗುಜರಾತ್ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶ ಮೂರ್ತಿ ಎನ್ ವಿ ಅಂಜಾರಿಯಾ ಅವರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಶಿಫಾರಸ್ಸು ಮಾಡಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ .ಎಸ್. ದಿನೇಶ್ ಕುಮಾರ್ ಅವರು ಫೆಬ್ರವರಿ 24ರಂದು ನಿವೃತ್ತಿಯಾಗಿದ್ದರು ಅವರ ಬಳಿಕ ತೆರವಾದ ಸ್ಥಾನಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರನ್ನು ಶಿಫಾರಸು ಮಾಡಿದೆ.
ನ್ಯಾಯಮೂರ್ತಿ ಅಂಜಾರಿಯಾ ಅವರ ಹೆಸರನ್ನು ಶಿಫಾರಸ್ಸು ಮಾಡುವಾಗ ಕೊಲಿಜಿಯಂ ಹೈಕೋರ್ಟ್ ಗಳ ಮುಖ್ಯ ನ್ಯಾಯಮೂರ್ತಿಗಳಲ್ಲಿ, ನ್ಯಾಯಮೂರ್ತಿ ಆಶಿಶ್ ಜೆ ದೇಸಾಯಿ ಅವರನ್ನು ಪ್ರಸ್ತುತ ಕೇರಳ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂಬ ಅಂಶ ಗಣನೆಗೆ ತೆಗೆದುಕೊಂಡು ನ್ಯಾಯಮೂರ್ತಿ ದೇಸಾಯಿ ರವರ ಮಾತೃ ಹೈಕೋರ್ಟ್ ಗುಜರಾತ್ ಆಗಿದೆ. ನ್ಯಾಯಮೂರ್ತಿ ಆಶಿಶ್ ಜೆ. ದೇಸಾಯಿ ಅವರು ಜುಲೈ 4 2018 ರಂದು ಅಧಿಕಾರದಿಂದ ನಿವೃತ್ತಾರಗಲಿದ್ದಾರೆಂದು ತಿಳಿಸಲಾಗಿದೆ. ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಕೊಲಿಜಿಯಂ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ನೇಮಕ ಮಾಡಲು ಪ್ರಸ್ತಾಪಿಸಿದ್ದು ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ನಿವೃತ್ತಿಯ ನಂತರ ಅಧಿಕಾರವನ್ನು ತ್ಯಜಿಸುವ ದಿನಾಂಕದಿಂದ ಇದು ಜಾರಿಗೆ ಬರುವಂತೆ ಸೂಚಿಸಲಾಗಿದೆ ಎಂದು ಹೇಳಿದರು. ಅಂಜಾರಿಯಾ ಅವರು 2011ರ ನವಂಬರ್ 21ರಂದು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಹೈಕೋರ್ಟ್ ನ್ಯಾಯಾಧೀಶರಾಗಿ ಭರ್ತಿ ಪಡೆದ ಮೊದಲು ಅವರು ಗುಜರಾತ್ ಹೈ ಕೋರ್ಟ್ ನಲ್ಲಿ ಸಿವಿಲ್ ಸಂವಿಧಾನಿಕ ಕಂಪನಿ ಕಾನೂನು ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ವಕೀಲರಾಗಿ ಕೆಲಸ ನಿರ್ವಹಿಸಿದರು ಮತ್ತು ಸಂವಿಧಾನಿಕ ಪ್ರಕರಣಗಳಲ್ಲಿ ಅವರು ಪರಿಣಿತಿ ಹೊಂದಿದ್ದಾರೆ ಎಂದು ಮೂಲಗಳಿಗೆ ತಿಳಿಸಿದ್ದಾರೆ.