Breaking
Mon. Dec 23rd, 2024

ಡ್ರಗ್ಸ್ ದಂಧೆಕೋರರ ಆಸ್ತಿ ಮುಟ್ಟುಗೋಲಿಗೆ ಕ್ರಮ ಕೈಗೊಳ್ಳಲು ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್

ವಿಶ್ವಕ್ಕೆ ಸವಾಲಾಗಿರುವ ಡ್ರಗ್ಸ್ ದಂಧೆಯನ್ನು ಎದುರಿಸುವಲ್ಲಿ ಕೆಲ ಸಣ್ಣ ರಾಷ್ಟ್ರಗಳು ಸೋತು ಕೈ ಚೆಲ್ಲಿ ನಿಂತಿವೆ. ಹಾಲೆಂಡ್, ಸ್ವಿಜರ್ಲ್ಯಾಂಡ್ ಸೇರಿದಂತೆ ಇನ್ನೂ ಕೆಲವು ದೇಶಗಳು ಏನಾದರೂ ಆಗಲಿ ಎಂಬಂತೆ ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವುದನ್ನು ನಿಲ್ಲಿಸಿ, ಸೋಲು ಒಪ್ಪಿಕೊಂಡಿವೆ. ಇಂತಹ ದುರಸ್ತಿ ನಮ್ಮ ದೇಶಕ್ಕೆ ಬರಬಾರದು ಈಗಲೇ ಎಚ್ಚೆತ್ತುಕೊಳ್ಳಬೇಕು.

ಪ್ರಬಲ ರಾಷ್ಟ್ರಗಳು ಯಾವುದೇ ಕಾರಣಕ್ಕೂ ಡ್ರಗ್ಸ್ ಯುವಕರ ಕೈಗೆ ಸಿಗಬಾರದು ಎಂಬ ಯುದ್ಧದ ರೀತಿ ಭಾವಿಸಿ ಕ್ರಮ ಕೈಗೊಂಡಿದ್ದಾರೆ. ಅದೇ ಮಾದರಿಯಲ್ಲಿ ಡ್ರಗ್ಸ್ ಮಟ್ಟ ಹಾಕಬೇಕು ಮಂಡ್ಯ, ಮೈಸೂರು, ಗದಗ ಜಿಲ್ಲೆಗಳು ಡ್ರಗ್ಸ್ ದಂಧೆ ನಿಯಂತ್ರಿಸಲು ಮುಂದಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸವಾಲ್ ಆಗಿ ಸ್ವೀಕರಿಸಿ ಜಿಲ್ಲಾ ಮಟ್ಟದಿಂದಲೇ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಂದು ಪೊಲೀಸ್ ಅಧಿಕಾರಿಗಳು ನಿರ್ದೇಶಿಸಬೇಕು.

ಬೆಂಗಳೂರು ಮಾದಕ ವಸ್ತು ದಂಧೆಯಲ್ಲಿ ಸಿಲುಕಿರುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಾಬಸ್ ಪೇಟೆಯಲ್ಲಿ ಕರ್ನಾಟಕ ವೇಸ್ಟೇಜ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಪ್ರದೇಶದಲ್ಲಿ ನಡೆದ ಡ್ರಗ್ಸ್ ಕರ್ನಾಟಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ. ಪಂಜಾಬಿನಲ್ಲಿ ಪ್ರತಿಯೊಬ್ಬ ಯುವಕರು ಮಾದಕ ವ್ಯಸನಕ್ಕೆ ಬಲಿಯಾದ ಮಾದಕ ವಸ್ತು ಬೆರೆಸಿದ ಚಾಕಲೇಟ್ ಮಾರುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಬೆಳಕಿಗೆ ಬಂದಿರುವ ಹೆಚ್ಚಿನ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಡ್ರಗ್ಸ್ ವ್ಯಸನಕ್ಕೆ ಸೇವಿಸುವಂತೆ ಮಾಡುತ್ತಾರೆ. ಈ ಆಧುನಿಕ ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಸಿದೆ ಎಂದು ಹೇಳಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಕೇಂದ್ರ ವಲಯ ಐಜಿಪಿ ಡಾಕ್ಟರ್ ಬಿ ಆರ್ ರವಿಕಾಂತ್ ಗೌಡ, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, ಎಡಿಜಿಪಿ ಉಮೇಶ್, ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಗುಪ್ತ, ದಕ್ಷಿಣ ವಲಯ ಐಜಿಪಿ ಅಮಿತ್ ಸಿಂಗ್, ಮೈಸೂರ್ ನಗರ ಪೊಲೀಸ್ ಆಯುಕ್ತ ರಮೇಶ್ ಹಾಗೂ ಕೇಂದ್ರ ಮತ್ತು ದಕ್ಷಿಣ ವಲಯದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರು.

Related Post

Leave a Reply

Your email address will not be published. Required fields are marked *