ಮಂಡ್ಯ : ಮಂಡ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ನರೇಂದ್ರ ಮೋದಿ ಅವರನ್ನು ಭೇಟಿಯಾದ ಬಳಿಕ ವೇದಿಕೆಗಳಲ್ಲಿ ಸಂತಸಗೊಂಡಿರುವ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಒಟ್ಟಾಗಿ ಸೇರಿಕೊಂಡು ಕೆಲಸ ಮಾಡುವುದನ್ನು ಮುಂದುವರಿಸೋಣ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಅವರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ತಮ್ಮ ನಿರಂತರ ಕಾರ್ಯದ ನಡುವೆಯೂ ನನಗೆ ಸಮಯ ನೀಡದಿದ್ದರೆ, ಅವರಿಗೆ ನನ್ನ ಧನ್ಯವಾದಗಳು ಎಂದು ಹೇಳಿದರು. ಮೋದಿಯವರು ವಿಶ್ವದ ಮಹಾನ್ ನಾಯಕರಾಗಿ, ಭಾರತದಂತಹ ಬೃಹತ್ ದೇಶವನ್ನು 10 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ ಭಾರತ ದೇಶಗಳ ಸಾಲಿಗೆ ಸೇರಿಸುವ ಶ್ರಮ ನಿಜಕ್ಕೂ ಶ್ಲಾಘನೀಯ.
ಸಂಸದೆ ಸುಮಲತಾ ಅಂಬರೀಶ್ ದೆಹಲಿಯಲ್ಲಿ ಬಿಜೆಪಿ ಟಿಕೆಟ್ ಗಾಗಿ ಪ್ರಯತ್ನ ಮುಂದುವರಿಸಿದ್ದಾರೆ. ಗುರುವಾರವಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ, ಬಿ.ಎಲ್. ಸಂತೋಷ್ ರವರನ್ನು ಭೇಟಿಯಾಗಿದ್ದ ಸುಮಲತಾ ಶುಕ್ರವಾರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.