ಚಿಕ್ಕಬಳ್ಳಾಪುರ : ಜಿಲ್ಲಾ ಆಯುಷ್ ಇಲಾಖೆಯಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದ ಆಯುಷ್ ಆರೋಗ್ಯ ಮತ್ತು ಕ್ಷೇಮ ಇಲಾಖೆಯಲ್ಲಿ ಆರೋಗ್ಯ ಅಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಫೆಬ್ರವರಿ 21ರ ಸಂಜೆಯೊಳಗೆ ಜಿಲ್ಲಾ ಆಯುಷ್ ಕಚೇರಿ ಜಿಲ್ಲಾಡಳಿತ ಭವನ ಚಿಕ್ಕಬಳ್ಳಾಪುರ ಕಚೇರಿ ವಿಳಾಸಕ್ಕೆ ನೇರವಾಗಿ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9902045775 ಕೆ ಸಂಪರ್ಕಿಸಬಹುದೆಂದು ಜಿಲ್ಲಾ ಆಯುಷ್ ಅಧಿಕಾರಿ ತಬೀಬಾ ಬಾನು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.