ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ಇಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ ಮನೆಗಳ ಗುಣಮಟ್ಟ ಉತ್ತಮವಾಗಿರಬೇಕು ಜೊತೆಗೆ ಮೂಲ ಸೌಕರ್ಯ ಸಹಿತ ಎಲ್ಲಾ ಕಾಮಗಾರಿಗಳು ನಿಗದಿತ ಅವಧಿ ಒಳಗೆ ಪೂರ್ಣಗೊಳಿಸಬೇಕು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ತಿಂಗಳ ಅಂತ್ಯದಲ್ಲಿ 36,000 ಮನೆಗಳ ಹಂಚಿಕೆ ಮಾಡುವ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಕಕಾಲದಲ್ಲಿ ರಾಜ್ಯದಲ್ಲೇ ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಚಾಲನೆ ಮಾಡಲಿದ್ದು .ಅದೇ ದಿನ ಫಲಾನುಭವಿಗಳಿಗೆ ಮನೆಯ ಕೀ ನೀಡಬೇಕು. ಕುಡಿಯುವ ನೀರು, ಒಳಚರಂಡಿ, ವಿದ್ಯುತ್ ಸಂಪರ್ಕ ಸಹಿತ ಮೂಲಸೌಕರ್ಯ ಕಾಮಗಾರಿ ಫೆಬ್ರವರಿ 20ರೊಳಗೆ ಮುಗಿದಿರಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.