ಮೈಸೂರು : ಬಿಜೆಪಿ ರಾಜ್ಯದ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯದ ಕಾರ್ಯಕರ್ತರ ಹಿತದೃಷ್ಟಿಯಿಂದ ಮುಂದಿನ ಅಭ್ಯರ್ಥಿಗಳ ಆಯ್ಕೆ ಮತ್ತು ಮೈತ್ರಿ ಅಭ್ಯರ್ಥಿಗಳು ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ ಎಂದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತ್ತೆ ಜೈಲಿಗೆ ಸೇರುತ್ತಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಇಬ್ಬರು ಗೂಂಡಾಗಳು ಎಂಬುದು ಜನರಿಗೆ ಗೊತ್ತಿದೆ.
ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲೇ ಸೆಟಲ್ಮೆಂಟ್ ಆಗಿದೆ ಇನ್ನು ಉಳಿದ ಪಾರ್ಟ್ ಕೊಡ ಜೈಲಲ್ಲಿ ಸೆಟ್ಲ್ಮೆಂಟ್ ಆಗುವ ಆಗುತ್ತೆ . ಅವರ ಮೇಲೆ ಕ್ರಮ ಕೈಗೊಳ್ಳಿ ಅಂದರೆ ನನಗೆ ನೋಟಿಸ್ ಕಳುಹಿಸುತ್ತಾರೆ ರಾಷ್ಟ್ರ ದ್ರೋಹಿಗಳನ್ನೇ ರಕ್ಷಣೆ ಮಾಡಿದ್ದಾರೆಂದು ಕಿಡಿಕಾರಿದರು.