ನವದೆಹಲಿ : ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಹೆಚ್ಚು ಯುವಕರನ್ನು ಸೇರಿಸಿಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಜೊತೆಗೆ ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸುವ ಸಲುವಾಗಿ ಹಿಂದಿ , ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಐತಿಹಾಸಿಕ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯವು ಅಧಿಕೃತ ಹೇಳಿಕೆ ನೀಡಿದೆ.
ಭಾರತಾದ್ಯಂತ 128 ನಗರಗಳಿಂದ ಸುಮಾರು 40 ಲಕ್ಷ ಅಭ್ಯರ್ಥಿಗಳಿಗೆ ಫೆಬ್ರವರಿ 20 ರಿಂದ ಮಾರ್ಚ್ 7 ರವರೆಗಿನ ಪರೀಕ್ಷೆಯನ್ನು ನಡೆಸುತ್ತದೆ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಇಡೀ ದೇಶಕ್ಕೆ ಭದ್ರತೆ ಒದಗಿಸುವ ಪಡೆಗಳು ಗಡಿ ಭದ್ರತಾ ಭದ್ರತಾ ಪಡೆ, ಇಂಡೋ ಟಿಬೆಯನ್ ಬಾರ್ಡರ್ ಪೊಲೀಸ್, ಸಶಸ್ತ್ರ ಸೀಮಾ ಬಾಲ್, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಸಿ.ಆರ್.ಪಿ. ಎಫ್. ಆಗಿರುತ್ತದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಆಂತರಿಕ ಭದ್ರತೆ ಗಡಿಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮತ್ತು ಹುದ್ದೆಗಳಿಗೆ ಎಸ್ ಎಸ್ ಎಸ್ ಪರೀಕ್ಷೆ ನಡೆಯುತ್ತಿದೆ. ಎಲ್ಲಾ ಪಡೆಗಳಿಗೆ ಸುಮಾರು 70 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರದ ಅಂಕಿ ಅಂಶಗಳಲ್ಲಿ ತಿಳಿದು ಬಂದಿದೆ.
ಭಾರತ ವೈವಿಧ್ಯತೆಯಲ್ಲಿ ಏಕತೆ ಸಾರುವ ದೇಶೀಯ ಸ್ಥಳೀಯ ಪ್ರಾದೇಶಿಕ ಭಾಷೆಗಳು ಪ್ರಾಂತೀಯವರು ತುಂಬಾ ಪ್ರಾಮುಖ್ಯತೆ ಪಡೆದಿದ್ದಾರೆ. ಭಾಷಾ ವೈವಿಧ್ಯತೆಯನ್ನು ಎತ್ತಿ ಹಿಡಿಯುವ ಸಲುವಾಗಿ ಕೇಂದ್ರ ಸರ್ಕಾರ ಈಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಭಾಷೆಗಳಲ್ಲಿ ಉತ್ತೇಜನ ವಿವಿಧ ಭಾಷಾ ಪರೀಕ್ಷಾರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸಲಾಗುತ್ತಿದೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದಕ್ಷಿಣ , ಈಶಾನ್ಯ ರಾಜ್ಯಗಳ ಅಭ್ಯರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ