ಧಾರವಾಡ : ಜಿಲ್ಲಾ ಪಂಚಾಯಿತಿ ಗ್ರಾಮೀಣ ಕೈಗಾರಿಕಾ ವಿಭಾಗ ಸಹಯೋಗದಲ್ಲಿ 2023 24 ನೇ ಸಾಲಿನ ಯೋಜನೆ ಅಡಿಯಲ್ಲಿ ಗ್ರಾಮೀಣ ಮತ್ತು ಸಹರಾ ಭಾಗದ ಉದ್ಯಮಿದಾರರು ಉತ್ಪಾದಿಸಿದ ವಸ್ತುಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಜಿಲ್ಲಾಮಟ್ಟದಲ್ಲಿ ಐದು ದಿನಗಳ ಕಾಲ ವಸ್ತು ಪ್ರದರ್ಶನ ಹಮ್ಮಿಕೊಂಡಿದೆ.
ಅಮರಗೋಳದ ಎಪಿಎಂಸಿ ಆವರಣದಲ್ಲಿರುವ ಕಾಯಂ ವಿವಿಧೋದ್ದೇಶ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಾರ್ಚ್ 2024ರ ಮೊದಲನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ವಸ್ತು ಪ್ರದರ್ಶನದಲ್ಲಿ ಭಾಗವಹಿಸುವವರು ಫೆಬ್ರವರಿ 23ರ ಒಳಗೆ ಅರ್ಜಿ ಸಲ್ಲಿಸಬೇಕು ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ಉದ್ಯಮಿದಾರರಿಗೆ 10 * 10 ಅಡಿ ಅಳತೆಯ ಒಂದು ಮಳಿಗೆಯನ್ನು ಮಾತ್ರ ಉದ್ಯಮಿದಾರರಿಗೆ ಉಚಿತವಾಗಿ ನೀಡುವುದು ಮತ್ತು ಮಳಿಗೆಯ ಹಂಚಿಕೆಯಲ್ಲಿ ಗ್ರಾಮೀಣ ವಿಭಾಗದ ಉದ್ಯಮಿದಾರರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕೈಗಾರಿಕಾ ವಿಸ್ತರಣಾಧಿಕಾರಿಗಳು ಹುಬ್ಬಳ್ಳಿ ದೂರವಾಣಿ ಸಂಖ್ಯೆ 9902412428, ಕೈಗಾರಿಕಾ ವಿಸ್ತರಣಾಧಿಕಾರಿಗಳು
ಧಾರವಾಡ ದೂರವಾಣಿ ಸಂಖ್ಯೆ : 9886251096 ಗೆ ಸಂಪರ್ಕಿಸಬಹುದು ಎಂದು ಗ್ರಾಮೀಣ ಕೈಗಾರಿಕಾ ವಿಭಾಗ ಮತ್ತು ಜಿಲ್ಲಾ ಪಂಚಾಯತ್ ಕೈಗಾರಿಕಾ ಉಪ ವಿಭಾಗದ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.