ಬೆಂಗಳೂರು : ರಾಜ್ಯದಲ್ಲಿ 256 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭರ್ತಿ ಮಾಡಿಕೊಳ್ಳುವ ಕುರಿತು ಕರ್ನಾಟಕ ಲೋಕಸೇವಾ ಆಯೋಗ ಪ್ರಸ್ತಾವನೆ ಸಲ್ಲಿಸಲಾಗಿದೆ.
ಶೀಘ್ರದಲ್ಲೇ ನೇಮಕಾತಿ ಜರುಗಲಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರು ವಿಧಾನಸಭೆಗೆ ತಿಳಿಸಿದ್ದಾರೆ.
ಕುಣಿಗಲ್ ಶಾಸಕ ಡಾಕ್ಟರ್ ರಂಗನಾಥ್ ಅವರ ಹೇಳಿದ ಗಮನಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಅವರು ಪಿಡಿಒ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಸಮಸ್ಯೆ ನಿವಾರಿಸಲು ಪ್ರಯತ್ನಿಸುವುದು.
ಪಿ.ಡಿ.ಒಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಪಿ.ಡಿ.ಒ.ಗಳನ್ನು ಬೇರೆಡೆಗೆ ನಿಯೋಜಿಸುವುದು ಸಹ ರದ್ದುಗೊಳಿಸಲಾಗಿದೆ ಎಂಬುದನ್ನ ಸಚಿವರ ಗಮನಕ್ಕೆ ತಿಳಿಸಲಾಗಿದೆ.
ಪಾರದರ್ಶಕವಾಗಿ ಮಾಡುವ ನಿಟ್ಟಿನಲ್ಲಿ ಕೌನ್ಸಿಲಿಂಗ್ ಮುಂದಿನ ವರ್ಷಗಳಲ್ಲಿ ಕೌನ್ಸಿಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆ ಮಾಡಲಾಗುವುದೆಂದು ಹೇಳಿದ್ದಾರೆ.