ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 16,000 ಅತಿಥಿ ಉಪನ್ಯಾಸಕರ ಖಾಯಂ ಪ್ರಸ್ತಾವನೆಗೆ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಲು ನಿಯಮಗಳಿಗೆ ಅವಕಾಶವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂಎಸ್ ಸಿ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ವಿಧಾನಪರಿಷತ್ ಸದಸ್ಯ ಎ. ದೇವೇಗೌಡ ಅವರು ನಿಯಮ 72ರ ಅಡಿ ಅತಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ತಮ್ಮನ ಸೆಳೆಯುವ ಸೂಚನೆಯನ್ನು ಮಂಡಿಸಿದರು.
ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16,000 ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ಖಾಲಿ ಇರುವ ಹುದ್ದೆಗಳನ್ನು ಖಾಯಂ ಮಾಡಲು ಅವಕಾಶ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವರು ಸದನಕ್ಕೆ ಉತ್ತರ ನೀಡಿದ್ದಾರೆ.