ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಇಂದು ಅವಹೇಳನ ಪ್ರಕರಣದಲ್ಲಿ ಬಿಜೆಪಿ ಇಬ್ಬರು ಶಾಸಕರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕಿ ಅಮಾನತಿಗೆ ಪ್ರತಿಭಟನೆ ನಡೆಸಿದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಮಂಗಳವಾರ ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜೊತೆಗೆ ಅನಿಲ್ ಜೆರಾಲ್ಡ್ ಲೋಬೋ ಎಂಬುವವರ ದೂರಿನ ಭಾಗದ ವಿ ಎಚ್ ಪಿ ಮುಖಂಡ ಶರಣ ಪಂಪ್ ವೆಲ್ ಪಾಲಿಕೆ ಸದಸ್ಯ ಸಂದೀಪ್ ಗರೋಡಿ ಭರತ್ ಕುಮಾರ್ ಸೇರಿದಂತೆ ಹಲವಾರ ವಿರುದ್ಧ ಎಫ್ ಐಆರ್ ಐಪಿಸಿ ಸೆಕ್ಷನ್ 143, 153 ಎ, 295 ಎ,505(2),506,149 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ಶಾಲೆಯ ಮುಂದೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದರು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಶಾಲೆಯ ಮುಂದೆ ಅಕ್ರಮವಾಗಿ ಗುಂಪುಗೂಡಿ ಜೈ ಶ್ರೀರಾಮ್ ಎಂದು ಘೋಷಣೆ ಹೋಗಿದ್ದಾರೆ.
ಶಾಲಾ ಆಡಳಿತ ಮಂಡಳಿ ನಿಯಮ ಉಲ್ಲಂಗಿಸುವಂತೆ ವಿದ್ಯಾರ್ಥಿ ಪ್ರಚೋದನೆ ನಡೆಸುತ್ತಿದ್ದಾರೆ ಕ್ರೈಸ್ತ ಧರ್ಮದ ವಿರುದ್ಧ ಇಂದು ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗುತ್ತಿದೆ ದಕ್ಷಿಣ ಕನ್ನಡ ಜಿಲ್ಲೆ ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿದರು ಎಂದು ಪಾಂಡೇಶ್ವರ ಠಾಣೆ ದಾಖಲೆಗಳನ್ನು ಸೇರುವ ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ.