ಇದೇ ಫೆಬ್ರವರಿ 8 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ ಅಸ್ತಿತ್ವದಲ್ಲಿ ಇರೋ ಜಿಲ್ಲೆಗಳ ಮಿತಿಯನ್ನು ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಿತ್ತು. ನೋಂದಣಿ ಕಾಯ್ದೆ 1908 (ಕೇಂದ್ರ ಅಧಿನಿಯಮ 16 – 1908) ಅಡಿಯಲ್ಲಿ ಜಿಲ್ಲೆಗಳ ಮಿತಿಯನ್ನು ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಿತ್ತು ಈ ಪೈಕಿ ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳಾಗಿರುವ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳ ಹೆಸರನ್ನು ಉಲ್ಲೇಖಿಸಲಾಗಿತ್ತು
ಸಿದ್ದರಾಮಯ್ಯ ಅವರು ಮಂಡಿಸಲಿರುವ ದಾಖಲೆಯ 15ನೇ ಬಜೆಟ್ ಸಹ ಇದಾಗಿದೆ ಬಜೆಟಿನಲ್ಲಿ ಸರ್ಕಾರ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿದ್ದು ಬೆಳಗಾವಿ ಮತ್ತು ತುಮಕೂರು ಜಿಲ್ಲೆಗಳ ವಿಭಜನೆಗೆ ಫಿಕ್ಸ್ ಆಗುತ್ತಾ ಅನ್ನೋ ಪ್ರಶ್ನೆ ಎದ್ದಿದೆ.