ನವದೆಹಲಿ ಚುನಾವಣಾ ಬಾಂಡ್ ಗಳ ಯೋಜನೆ ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ
ಚುನಾವಣಾ ಬಾಂಡ್ ಗಳ ಕಾನೂನಿನ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ ಸರ್ಕಾರ ಹಾಗೂ ಅರ್ಜಿದಾರರ ನಡುವಿನ ವಾದ ಪ್ರತಿವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ನೇತೃತ್ವದ ಪಂಚ ಸದಸ್ಯರ ನ್ಯಾಯ ಪೀಠವು ಕಳೆದ ನವಂಬರ್ ನಲ್ಲಿ ತೀರ್ಪು ಕಾಯ್ದಿರಿಸಿತ್ತು .
ಇವರು ನ್ಯಾಯಾಧೀಶರ ಸಂವಿಧಾನ ಪೀಠವು ಕಪ್ಪು ಹಣದ ವಿರುದ್ಧ ಹೋರಾಡುವ ಉದ್ದೇಶ ಮತ್ತು ದಾನಿಗಳ ಗೌಪ್ಯತೆಯನ್ನು ಕಾಪಾಡುವುದು ಯೋಜನೆಯನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದೆ ಚುನಾವಣಾ ಬಾಂಡ್ ಗಳು ಕಪ್ಪು ಹಣವನ್ನು ತಡೆಯುವ ಏಕೈಕ ಮಾರ್ಗವಲ್ಲ ಎಂದು ಹೇಳಿ ಯೋಜನೆಯನ್ನೇ ರದ್ದುಪಡಿಸಿದೆ.