ನವದೆಹಲಿ ಖ್ಯಾತ ಉರ್ದು ಗೀತ ರಚನೆಕಾರ ಮತ್ತು ಕವಿ ಗುಲ್ಜಾರ್ ಸಾಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯರು ಇವರಿಗೆ 2023ರ ಜ್ಞಾನಪೀಠ ಪ್ರಶಸ್ತಿ ಘೋಷಿಸಲಾಗಿದೆ.
ಗುಲ್ಜಾರ್ ಪ್ರಸ್ತುತ ಕಾಲದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಗೀತಾ ರಚನೆಗೆ ಹೆಸರುವಾಸಿಯಾಗಿದ್ದಾರೆ. ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಈ ಹಿಂದೆ 2002ರಲ್ಲಿ ಉರ್ದು ಸಾಹಿತಿ ಅಕಾಡೆಮಿ ಪ್ರಶಸ್ತಿ 2013ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2004ರಲ್ಲಿ ಪದ್ಮವಿಭೂಷಣ ಮತ್ತು ಅವರ ಕೃತಿಗಾಗಿ ಕನಿಷ್ಠ ಐದು ರಾಷ್ಟ್ರೀಯ ಚಲನಚಿತ್ರಗಳನ್ನು ಕೂಡ ಪಡೆದಿದ್ದಾರೆ.
ಮಧ್ಯಪ್ರದೇಶದ ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕರು ಹಾಗೂ ಮುಖ್ಯಸ್ಥರಾದ ಜಗದ್ಗುರು ರಾಮಭದ್ರಾಚಾರ್ಯರು ಹೆಸರಾಂತ ಸಂಸ್ಕೃತ ವಿದ್ವಾಂಸ, ಹಿಂದೂ ಆಧ್ಯಾತ್ಮಿಕ ನಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ನೂರಕ್ಕೂ ಹೆಚ್ಚು ಪುಸ್ತಕಗಳ ಬರಹಗಾರರಾಗಿದ್ದಾರೆ. ಇವರು ಕೂಡ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯು ತಿಳಿಸಿದೆ.