ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಂಡಿತು.
ಈ ಕಾರ್ಯಕ್ರಮದಲ್ಲಿ ಬಸವಣ್ಣನವರ ತತ್ವಗಳು ಆಚಾರ ವಿಚಾರ ಹಾಗೂ “ಕಲಬೇಡ ಕುಲ ಬೇಡ ಅನ್ಯರಿಗೆ ಅಸಹ್ಯ ಪಡಬೇಡ ಇದೆ ಅಂತರಂಗ ಶುದ್ದಿ, ಇದೇ ಬಹಿರಂಗ ಸುದ್ದಿ “ಎಂಬ ಬಸವಣ್ಣನವರ ವಚನ ಆಧಾರಿತ ಅವರ ಭಾವಚಿತ್ರಕ್ಕೆ ಜಿಲ್ಲಾ ವಾರ್ತಾಧಿಕಾರಿಗಳು ಬಿ.ವಿ ತುಕಾರಾಮ್ ರವರು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಜೈ ವೆಂಕಟೇಶ್ ವೇಣುಗೋಪಾಲ್, ಚಂದ್ರಶೇಖರ್ ಅಂಜನಮೂರ್ತಿ ಮುಂತಾದವರು ಭಾಗವಹಿಸಿದ್ದರು.