ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸುಸ್ತು, ಸಮಸ್ಯೆಯಿಂದ ಬಳಲುತ್ತಿದ್ದ ಹೆಚ್.ಡಿ. ದೇವೇಗೌಡ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಡಾ. ಸತ್ಯನಾರಾಯಣ ಮೈಸೂರು ನೇತೃತ್ವದ ತಂಡದಿಂದ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗಿದೆ.
ಇದೀಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಪದ್ಮನಾಭನಗರದ ಮನೆಗೆ ತೆರಳಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ.