Breaking
Mon. Dec 23rd, 2024

ನರೇಂದ್ರ ಮೋದಿಯವರು ಜೈನ ಮನಿ ಆಚಾರ್ಯ ವಿದ್ಯಾಸಾಗರ್ ಅವರಿಗೆ ಸಂತಾಪ

ನವದೆಹಲಿ ಖ್ಯಾತ ಜೈನ ಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ಅವರು ಇಂದು ನಿಧನರಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಆಚಾರ್ಯ ವಿದ್ಯಾಸಾಗರ ಮಹಾರಾಜರಿಗೆ 77 ವರ್ಷ ವಯಸ್ಸಾಗಿತ್ತು ಛತ್ತೀಸ್ಗಡದಲ್ಲಿ ಡೊಂಗರ್  ಗಡ್ ಚಂದ್ರಗಿರಿ ತೀರ್ಥದಲ್ಲಿ ಭಾನುವಾರ ಮುಂಜಾನೆ ನಿಧನರಾದರು. ವಿದ್ಯಾಸಾಗರ ಮಹಾರಾಜರ ನಿಧನದ ಹಿನ್ನೆಲೆಯಲ್ಲಿ ಸರ್ಕಾರದಿಂದ ಅರ್ಧ ರಜೆ ಘೋಷಿಸಲಾಗಿದೆ.

ಪ್ರಧಾನಮಂತ್ರಿ ಟ್ವೀಟ್ ಮೂಲಕ ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜಿ ಮಹಾರಾಜ್ ಅವರು ಸಾಮಾಜಿಕ ಮೌಲ್ಯ ಕೊಡುಗೆಗಳನ್ನು ನೀಡಿದ್ದಾರೆ. ವಿಶೇಷವಾಗಿ ಜನರಲ್ಲಿ ಆಧ್ಯಾತ್ಮಿಕ ಜಾಗೃತಿಗಾಗಿ ಅವರು ಮಾಡಿದ ಪ್ರಯತ್ನಗಳು ಬಡತನ ನಿರ್ವಹಣೆ ಆರೋಗ್ಯ ರಕ್ಷಣೆ ಶಿಕ್ಷಣ ಹೀಗೆ ಸಾಕಷ್ಟು ಕೊಡುಗೆಗಳನ್ನು ಕೊಟ್ಟಿದ್ದಾರೆ. ಹೀಗೆ ಅವರು ಮಾಡಿದ ಉತ್ತಮ ಕೆಲಸಗಳಿಂದ ಮುಂದಿನ ಪೀಳಿಗೆಯವರು ನೆನಪಿಸಿಕೊಳ್ಳುತ್ತಾರೆ.

ವರ್ಷಗಳ ಕಾಲ ಅವರ ಆಶೀರ್ವಾದ ಪಡೆಯುವ ಗೌರವ ನನಗಿತ್ತು ಕಳೆದ ವರ್ಷದ ಕೊನೆಯಲ್ಲಿ ಛತ್ತೀಸ್ಗಡದ   ಡೊಂಗಾರ್  ಗಡ್ ನಲ್ಲಿರುವ ಚಂದ್ರಗಿರಿ ಜೈನ್ ಮಂದಿರಕ್ಕೆ ನಾನು ಬೇಟೆ ನೀಡಿದ್ದು ಎಂದಿಗೂ ಮರೆಯಲು ಸಾಧ್ಯವಿಲ್ಲ ಆ ಸಮಯದಲ್ಲಿ ನಾನು ಆಚಾರ್ಯ ಶ್ರೀ 108 ವಿದ್ಯಾಸಾಗರ್ ಮಹಾರಾಜ್ ಅವರೊಂದಿಗೆ ಸಮಯ ಕಳೆದಿದ್ದೇನೆ ಮತ್ತು ಅವರ ಆಶೀರ್ವಾದ ಸಹ ಪಡೆದಿದ್ದೇನೆ ಎಂದು ಮೋದಿ ಅವರು ಮೂಲಕ ತಮ್ಮ ಅಭಿಪ್ರಾಯ ಹಾಗೂ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸಿದ್ದಾರೆ.

Related Post

Leave a Reply

Your email address will not be published. Required fields are marked *