ಬೆಂಗಳೂರು ಟಾಟಾ ಸಮುದಾಯದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 20300 ಕೋಟಿ ರೂಪಾಯಿ ಹೂಡಿಕೆ ಮಾಡಲು ಮುಂದಾಗಿದೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ಸಮ್ಮುಖದಲ್ಲಿ ಈ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.
ಬಳಿಕ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರ್ವಾಲ್ ಹಾಗೂ ಟಿ ಎ.ಎಸ್. ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.
ವಿಧಾನಸೌಧದಲ್ಲಿ ನಡೆದ ಒಡಂಬಡಿಕೆ ವಿನಿಮಯದ ನಂತರ ಮಾತನಾಡಿ ಸಚಿವ ಟಾಟಾ ಸಮೂಹದ ಒಡಂಬಡಿಕೆಯಿಂದ ನೇರವಾಗಿ 1650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಒಡಂಬಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ ದುರಸ್ತಿ ಮತ್ತು ಓವರ್ ಆಲ್ ಘಟಕವನ್ನು ಸ್ಥಾಪಿಸಲು 1.300 ಕೋಟಿ ಕೊಡಲಾಗಿದೆ. ಇದರಿಂದಾಗಿ 1200 ಜನರಿಗೆ ನೇರ ಉದ್ಯೋಗ ಸಿಗಲಿದ್ದು ಪರೋಕ್ಷವಾಗಿ 25000 ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ ಹಿಡಿ ಭಾರತದಲ್ಲಿ ಇದು ಇಂತಹ ಮೊಟ್ಟಮೊದಲ ಯೋಜನೆಯಾಗಲಿದೆ ಎಂದರು.
ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ ಲಿಮಿಟೆಡ್ ಕಂಪನಿಯ ಮರಿ ಯೋಜನೆಗಳಿಗೆ 190 ಕೋಟಿ ರೂಪಾಯಿ ಬಂಡವಾಳ ಹೂಡಲಿದೆ ಇವುಗಳ ಪೈಕಿ 420 ಕೋಟಿ ರೂಪಾಯಿಗಳನ್ನು ಅದು ನಾಗರಿಕ ವಿಮಾನಗಳನ್ನು ಸರಕು ಸಾಗಾಣಿಕೆ ವಿಮಾನಗಳನ್ನಾಗಿ ಪರಿವರ್ತಿಸುವ ಘಟಕ ಸ್ಥಾಪನೆಗೆ ವಿನಿಯೋಗಿಸಲಿದೆ. ಜೊತೆಗೆ 360 ಕೋಟಿ ರೂಪಾಯಿ ಹೂಡಿಕೆಯಿಂದ ಗನ್ ತಯಾರಿಕಾ ಘಟಕ ಮತ್ತು 300 ಕೋಟಿ ರೂ ವೆಚ್ಚದ ವಿಮಾನ ಯಾನ ಮತ್ತು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಿದೆ. ಇದರಿಂದ 450 ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ವಿವರಿಸಿದರು.