ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಬೆಂಗಳೂರಿನ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಬಸ್‌ನಲ್ಲಿ ತೆರಳಲು ಬಿ. ಬಿ. ಎಂ. ಟಿ. ಸಿ. ಅವಕಾಶ ನೀಡಿದೆ.
ಮಾರ್ಚ್ 1 ಮಾರ್ಚ್ 22 ರ ವರೆಗೆ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಉಚಿತವಾಗಿ ಪ್ರಯಾಣಿಸಬಹುದು ಬಿಎಂಟಿಸಿ ವೋಲ್ವೊ ಬಸ್ ಉಳಿದಿದ್ದರೆ ಉಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಮನೆಯಿಂದ ಪರೀಕ್ಷಾ ಕೊಠಡಿಗೆ ಉಚಿತವಾಗಿ ಪ್ರಯಾಣಿಸಬಹುದು.
ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಣೆಗೆ ಸೂಚನೆ ನೀಡಲಾಗಿತ್ತು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿ ಎಂ ಟಿ ಸಿ ಚಿಂತನೆ ನಡೆಸಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಪರೀಕ್ಷೆ ಕೇಂದ್ರಕ್ಕೆ ತೆರಳಬಹುದು.
ಸಾಮಾನ್ಯವಾಗಿ ಪ್ರತಿ ವರ್ಷವೂ ಸಹ ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ಸಂಸ್ಥೆಗಳು ಎಸ್‌ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಉಚಿತ ಸೇವೆ ನೀಡಲಾಗಿದೆ.
ಸದ್ಯಕ್ಕೆ ಬೆಂಗಳೂರಿನಲ್ಲಿ ಉಚಿತ ಸೇವೆಯನ್ನು ಬಿಎಂಟಿಸಿ ಘೋಷಿಸಿದೆ, ಇನ್ನು ಉಳಿದ ಜಿಲ್ಲೆಗಳಿಗೆ ಕೆಎಸ್ಆರ್ಟಿ ಈ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿದೆ.
ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22 ರ ವರೆಗೆ ನಡೆಯುತ್ತಿದೆ. ಸದ್ಯಕ್ಕೆ ಈ ಸಲ ಬಿಎಂಟಿಸಿ ಎಲ್ಲ ಸಿದ್ದತೆಗಳನ್ನು ಮಾಡಿಕೊಂಡಿವೆ. ಪರೀಕ್ಷೆಗೆ ದಾಖಲಾಗಿರುವ ವಿದ್ಯಾರ್ಥಿಗಳು ತಮ್ಮ ಶಾಲೆಗೆ ತೆರಳಿ ಪ್ರವೇಶ ಪತ್ರವನ್ನು ಪಡೆಯಬಹುದು.