ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯ ವಿಠ್ಠಲ್ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪರೀಕ್ಷೆಗೆ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲಾಗುತ್ತದೆ.
ಆಸಕ್ತ ವಿದ್ಯಾರ್ಥಿಗಳು ಪೋಷಕರು, ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ದಿನಾಂಕ 27/2/2024ರ ಒಳಗೆ ಬೆಳಗ್ಗೆ 10 ಗಂಟೆಯಿಂದ 4 ಗಂಟೆವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ತಿಳಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 0821-2515944 ಸಂಪರ್ಕಿಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಕೆ ಎಲ್ ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.