ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು.
ಉದ್ಯೋಗವನ್ನು ಬಯಸುವಂತಹ ಬಳ್ಳಾರಿ ಜಿಲ್ಲೆಯ ವಿಕಲಚೇತನರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಹೆಚ್. ಗೋವಿಂದಪ್ಪ ಅವರು ತಿಳಿಸಿದ್ದಾರೆ. https://udyoga.skillconnet.kaushalkar.com/ಲಿಂಕಿಗೆ ಭೇಟಿ ನೀಡಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲೆಯ ಎಮ್ .ಆರ್. ಡಿ ಯು ಗಳ ದೂರವಾಣಿ ಸಂಖ್ಯೆ 88808875620, ಕರಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ದೂರವಾಣಿ ಸಂಖ್ಯೆ-08392-267886 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.