ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿದೆ ಎಂಬುದನ್ನು ಎ ಶಂಕುಸ್ಥಾಪನೆ ಸಾಕ್ಷಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ ಆರೋಪಕ್ಕೆ ತಿರುಗೇಟು ಕೊಟ್ಟರು.
ಧಾರವಾಡ ಜಿಲ್ಲೆಯ ನವಲಗುಂದ ಮಾಡಲ್ ಸ್ಕೂಲ್ನಲ್ಲಿ ನಡೆದಿದ್ದ ಯೋಜನೆಗಳಿಗೆ ಚಾಲನೆ ಹಾಗೂ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ. ಸಿದ್ದರಾಮಯ್ಯನವರು ಫಲಾನುಭವಿಗಳಿಗೆ ಆಶ್ರಯ ಯೋಜನೆ ಮನೆಗಳ ಹಕ್ಕು ಪತ್ರ ವಿತರಣೆ ಮಾಡಿದರು.
ನವಲಗುಂದ ವಿಧಾನಸಭಾ ಕ್ಷೇತ್ರದ ಅನೇಕ ಯೋಜನೆಗಳಿಗೆ ಚಾಲನೆ ಕೊಟ್ಟಿದ್ದೇವೆ ಗ್ಯಾರೆಂಟಿ ಜಾರಿ ಮಾಡಿರುವ ಕಾರಣಕ್ಕೆ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಹಣ ಇರದ ಕಾರಣ ಅಭಿವೃದ್ಧಿ ಮಾಡುತ್ತಿಲ್ಲ ಎನ್ನುತ್ತಿದ್ದಾರೆ. ಇವತ್ತು ನಿಮ್ಮ ಮುಂದೆ ಕೋಟ್ಯಾಂತರ ರೂಪಾಯಿ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದೇವೆ ಅಭಿವೃದ್ಧಿ ಕೆಲಸ ಆಗುತ್ತೇವೆ ಅನ್ನೋದಕ್ಕೆ ಈ ಕಲ್ಲುಗಳೇ ಸಾಕ್ಷಿ ಎಂದರು.
ಕೇವಲ ರಾಜಕೀಯಕ್ಕೆ ಬಿಜೆಪಿ ಆರೋಪ ಮಾಡುತ್ತಿದೆ. ಆರೋಪದಲ್ಲಿ ಸತ್ಯ ಇಲ್ಲ, ಉರುಳಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿ 1985 ಫಲಾನುಭವಿಗಳಿಗೆ ವಸತಿ ಹಕ್ಕು ಪತ್ರ ನೀಡಿದ್ದಾರೆ ಇದು ಅಭಿವೃದ್ಧಿಯೋ ಅಲ್ಲವೋ ನೀವೇ ತೀರ್ಮಾನಿಸಿ ಎಂದು ಹೇಳಿದರು.
ಈ ಹಿಂದೆ ಕೋನ ರೆಡ್ಡಿ ಜೆಡಿಎಸ್ ನಲ್ಲಿದ್ದರೂ ನನ್ನಿಂದ ಅನೇಕ ಕೆಲಸ ಮಾಡಿಸಿದ್ದಾರೆ 3000 ಕೋಟಿಯಷ್ಟು ನನ್ನಿಂದ ಕೋನ ರೆಡ್ಡಿ ಕೆಲಸ ಮಾಡಿಸಿದ್ದಾರೆ ನಾವು ಬಡವರು ದಲಿತರ ಪರ ಕಾರ್ಯಕ್ರಮ ಕೊಟ್ಟಿದ್ದೇವೆ ನಾನು ಹಿಂದೆ ಮುಖ್ಯಮಂತ್ರಿ ಇದ್ದಾಗಲೂ ಅನೇಕ ಕಾರ್ಯಕ್ರಮಗಳು ಮಾಡಿದ್ದೇವೆ “ನುಡಿದಂತೆ ನಡೆದಿದ್ದು ಕಾಂಗ್ರೆಸ್ ಸರ್ಕಾರ ಮಾತ್ರ” ಬಿಜೆಪಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದರು.
ಬಿಜೆಪಿ 600 ಭರವಸೆ ಕೊಟ್ಟರು, ಅದರಲ್ಲಿ 60 ಭರವಸೆಗಳನ್ನು ಈಡೇರಿಸಿಲ್ಲ ನಾವು ಈ ಬಾರಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು ಅಧಿಕಾರ ಬಂದರೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದೆವು. ಅದರಂತೆ ನಾವು ಅಧಿಕಾರಕ್ಕೆ ಬಂದು 9 ತಿಂಗಳು ಆಗಿದೆ ಎಂಟು ತಿಂಗಳಲ್ಲಿ 5 ಗ್ಯಾರಂಟಿ ಘೋಷಣೆ ಮಾಡಿದ್ದೇವೆ.
ಮಹಿಳೆಯರಿಗೆ ರಾಜ್ಯದಲ್ಲಿ ಟಿಕೆಟ್ ರಹಿತ ಪ್ರಯಾಣ ಘೋಷಣೆ ಮಾಡಿದ್ದೆವು. ಇವತ್ತಿನವರೆಗೂ ಅರವತ್ತು ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ.
ಕರ್ನಾಟಕದಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಫ್ರೀಯಾಗಿ ಓಡಾಡುವಂತೆ ಮಾಡಿದ್ದು ಕಾಂಗ್ರೆಸ್ ಮಾತ್ರ. ಬಿಜೆಪಿ ಗ್ಯಾರಂಟಿ ಕೊಟ್ಟರೆ, ಆರ್ಥಿಕ ದಿವಾಳಿ ಅಂತ ಹೇಳಿದರು. ನಾವು ಇವತ್ತು 150 ಕೋಟಿ ಯೋಜನೆಗೆ ಚಾಲನೆ ನೀಡುತ್ತಿದ್ದೇವೆ, ಇದು ಹೇಗೆ ಸಾಧ್ಯ ? ಸರ್ಕಾರ ದಿವಾಳಿ ಆಗಿದೆಯೋ ಇಲ್ಲವೋ ಎಂಬುದನ್ನು ಈ ಬಿಜೆಪಿಯವರ ಹೇಳಿಕೆಗೆ ಜನರೇ ಉತ್ತರ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದರು.