ಚಳ್ಳಕೆರೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಟಿ ರಘುಮೂರ್ತಿ ರಾಜ್ಯದಲ್ಲಿ ಉತ್ತಮವಾಗಿ ಮಳೆ ಬೆಳೆ ಆಗಲಿ ಎಂದು ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.
ಚಳ್ಳಕೆರೆ ತಾಲೂಕಿನ ತುರುವನೂರು ಗ್ರಾಮದಲ್ಲಿ ನಡೆದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆದು ಜನರ ಕಷ್ಟಕ್ಕೆ ಸಿಲುಕಿದ್ದಾರೆ, ಮಳೆ ಸುರಿದು ಭೂಮಿತಾಯಿಯ ಮಡಿಲು ತಂಪಾಗಿ ಉತ್ತಮ ಮಳೆ ಬೆಳೆ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿ ಕಾಣಿಸುತ್ತಿದ್ದು. ಕುಡಿಯುವ ನೀರಿನ ಅಭಾವ ಉಂಟಾಗಿದೆ ಗ್ರಾಮಗಳಲ್ಲಿ ಈಗಾಗಲೇ ಅಧಿಕಾರಿಗಳಿಗೆ ಮುಂಜಾಗ್ರತೆ ತೆಗೆದುಕೊಳ್ಳಲು ಶಾಸಕರು ಸೂಚನೆ ನೀಡಿದರು.
ಜಿಲ್ಲೆಯ ಆರು ತಾಲೂಕುಗಳು ಈಗಾಗಲೇ ಬರಪೀಡಿತ ತಾಲೂಕುಗಳೆಂದು ಘೋಷಣೆಯಾಗಿದೆ. ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರಕ್ಕಾಗಿ ನೀರಿನ ಮೂಲಗಳು ಪೈಪ್ಲೈನ್ ಗಳ ಮೂಲಕ ವಿಸ್ತರಣೆ ಬೋರ್ವೆಲ್ ಗಳ ದುರಸ್ತಿ ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡುವಂತೆ ಎಲ್ಲಾ ಮಾಹಿತಿಯನ್ನು ಪಡೆಯಲು ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ. ಒಂದು ವೇಳೆ ನೀರು ಲಭ್ಯವಾಗದೆ ಇರುವ ಪಕ್ಷದಲ್ಲಿ ಟ್ಯಾಂಕರ್ ಗಳ ಮೂಲಕ ನೀರನ್ನು ಸರಬರಾಜು ಮಾಡುವುದಾಗಿ ಕೊನೆಯ ಆದ್ಯತೆ ಎಂದು ತಿಳಿಸಿದರು.
ಚಳ್ಳಕೆರೆ ಕ್ಷೇತ್ರದ ಪ್ರತಿಯೊಂದು ಹಳ್ಳಿ ಇಂದ ಮಾಹಿತಿ ಪಡೆದಿದ್ದು ಅಗತ್ಯವಾದ ಯಾವ ಗ್ರಾಮಗಳಿಗೂ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಿಡಿಒಗಳಿಗೆ ಸೂಚನೆ ನೀಡಿದ್ದೇನೆ. ತಾಲೂಕು ಪಂಚಾಯಿತಿ ಸಿಇಒ ಅವರಿಗೆ ಸಮಸ್ಯೆ ಗಳಿಗೆ ಕೂಡಲೇ ಸ್ಪಂದಿಸಿ ಎಂದು ಖಡಕ್ ಸೂಚನೆ ನೀಡಿದ್ದೇನೆ, ಜನರಿಗೆ ನೀರಿನ ಭಾವನೆ ಬಾರದಂತೆ ತಡೆಯಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತುರುವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪ ಮಹೇಶ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ರಾಮಕೃಷ್ಣ ರೆಡ್ಡಿ, ನಿಟ್ಟೂರು ಶೇಷಾದ್ರಿ ರೆಡ್ಡಿ ,ಸುಭಾಷ್ ರೆಡ್ಡಿ, ಮಂಜುನಾಥ್ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದರು.