ದಾವಣಗೆರೆ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಬೆಂಗಳೂರು ಇವರು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.
ಉದ್ಯೋಗ ಆಕಾಂಕ್ಷೆಗಳು ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗವನ್ನು ಪಡೆದು ಕೊಂಡು ನಿರುದ್ಯೋಗ ನಿರ್ಮೂಲನೆಯನ್ನು ಹೋಗಲಾಡಿಸಬೇಕೆಂದು ಕರ್ನಾಟಕ ಸರ್ಕಾರ ಈ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಸೈಟ್ ನಲ್ಲಿ https ://udyoga.skillconnet.kaushalkar.com/ನೋಂದಾಯಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.
ವಿಕಲಚೇತನ ಉದ್ಯೋಗ ಆಕಾಂಕ್ಷಿಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕೆಂದು ಹಾಗೂ ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ಡಾಕ್ಟರ್ ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.