ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಬೇಟೆ ಕುಮಾರಸ್ವಾಮಿ ಇದ್ದರು.
ಮಾರ್ಚ್ ಒಂದರಿಂದ 22 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಯಾವುದೇ ದೋಷವಿಲ್ಲದೆ ಸುಗಮವಾಗಿ ಪರೀಕ್ಷೆ ನಡೆಸಬೇಕು.
ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ 24 ಪರೀಕ್ಷಾ ಕೇಂದ್ರಗಳಿಗೆ ಏ ಮತ್ತು ಬಿ ದರ್ಜೆಯ ಅಧಿಕಾರಿಗಳನ್ನು ವೀಕ್ಷಕರು ನೇಮಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಪರೀಕ್ಷೆ ನಡೆಯುವ ದಿನಗಳಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚುವುದು ಮತ್ತು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿಸಲಾಗಿದೆ 144 ಸೆಕ್ಷನ್ ಅನ್ನು ಜಾರಿಗೊಳಿಸಲಾಗಿದೆ.
ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ಸೇರಿದಂತೆ ಎಲ್ಲಾ ಕೇಂದ್ರಗಳು ಡಿವೈಸ್ ಉಪಕರಣಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು ಕಚೇರಿ ಸಿಬ್ಬಂದಿ ಕೂಡ ಪರೀಕ್ಷೆ ನಡೆಸುವ ಮೊಬೈಲ್ ತರುವುದನ್ನು ನಿಷೇಧಿಸಲಾಗಿದೆ. ಇಂತಹ ಪ್ರಕರಣದಲ್ಲಿ ಶಿಸ್ತುಕ್ರಮ ಜರುಗಿಸಲು ಮುಖ್ಯ ಅಧಿಕಾರಿಗಳು ಬೇಸಿಕ್ ಸೆಟ್ಟನ್ನು ಉಪಯೋಗಿಸಲು ಅವಕಾಶ ನೀಡಲಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿ ಜಿಲ್ಲೆಯಲ್ಲಿ 24 ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 15622 ವಿದ್ಯಾರ್ಥಿಗಳ ಪರೀಕ್ಷೆ ಬರೆಯಲಿದ್ದಾರೆ ಜಿಲ್ಲೆಯಲ್ಲಿ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇಲ್ಲ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಅವಶ್ಯಕತೆ ಇದೆ.
ಪರೀಕ್ಷೆ ಪ್ರಾರಂಭವಾಗುವ ಮೊದಲು ಒಂದು ಗಂಟೆ ಮೊದಲು ಹಾಗೂ ಪರೀಕ್ಷೆಯ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಏಳು ಮಾರ್ಗಗಳು ತಂಡಕ್ಕೆ ಸ್ಥಳೀಯ ಮಾರ್ಗ ಅಧಿಕಾರಿಗಳ ಜೊತೆ ಪೊಲೀಸ್ ರಕ್ಷಣೆ ಅಗತ್ಯವಿದೆ.
ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯ್ಯುವ ವಾಹನಗಳಿಗೆ ಜಿಪಿಎಸ್ ಸೇವೆಯನ್ನು ಅಳವಡಿಸಿಕೊಳ್ಳಬೇಕು. 24 ಪರೀಕ್ಷಾ ಕೇಂದ್ರಗಳು 1562 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಒಟ್ಟು 24 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ 14242 ಹೊಸ 978 ಪುನರಾವರ್ತಿತ ಮತ್ತು 42 ಖಾಸಗಿ ಸೇರಿ ಒಟ್ಟು 1562 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಚಿತ್ರದುರ್ಗ ತಾಲೂಕಿನಲ್ಲಿ 9 ಪರೀಕ್ಷಾ ಕೇಂದ್ರಗಳಲ್ಲಿ 6129 ವಿದ್ಯಾರ್ಥಿಗಳು, ಚಳ್ಳಕೆರೆ ತಾಲೂಕಿನಲ್ಲಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ 2917 ವಿದ್ಯಾರ್ಥಿಗಳು, ಹಿರಿಯೂರಿನ ತಾಲೂಕಿನಲ್ಲಿ 4 ಪರೀಕ್ಷಾ ಕೇಂದ್ರಗಳಲ್ಲಿ 1893 ವಿದ್ಯಾರ್ಥಿಗಳು, ಹೊಸದುರ್ಗ ತಾಲೂಕಿನಲ್ಲಿ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ 217 ವಿದ್ಯಾರ್ಥಿಗಳು, ಮೊಳಕಾಲ್ಮೂರು ತಾಲೂಕಿನ ಎರಡು ಪರೀಕ್ಷಾ ಕೇಂದ್ರಗಳಲ್ಲಿ 1027 ವಿದ್ಯಾರ್ಥಿಗಳು ಹಾಗೂ ಹೊಳಲ್ಕೆರೆ 194 ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ. .
ದ್ವಿತೀಯ ಪಿಯು ಉಚಿತ ಪ್ರಯಾಣಕ್ಕೆ ಅವಕಾಶ : ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಕೆಎಸ್ಆರ್ಟಿಸಿ ವತಿಯಿಂದ ಉಚಿತ ಬಸ್‌ಗೆ ಅವಕಾಶವಿದೆ. ಕೆಎಸ್ಆರ್ಟಿಸಿ ವಿಭಾಗದ ನಿಯಂತ್ರಣ ಅಧಿಕಾರಿಗಳು.
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ದಿನಾಂಕ ಮಾರ್ಚ್ ಒಂದರಿಂದ 22ರವರೆಗೆ ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗುವ ಮತ್ತು ಹಿಂತಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಬಹುದು ಎಂದು ಆ ಸಭೆಗೆ ಮಾಹಿತಿ ಲಭ್ಯವಿರುತ್ತದೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವಾಗ ಅನುಕೂಲವಾಗುವ ವ್ಯವಸ್ಥೆ ಪರೀಕ್ಷಾ ಪ್ರಕಾರ ಬಸ್ಸು ಮಾಡುವಂತೆ ಅಪರ ಜಿಲ್ಲಾಧಿಕಾರಿ ಭೇಟಿ ಕುಮಾರಸ್ವಾಮಿ ಸೂಚನೆಯನ್ನು ಸೂಚಿಸಿದ್ದಾರೆ. ಸಭೆಗೆ ಜಿಲ್ಲಾ ಖಜಾನಾಧಿಕಾರಿ ರಮೇಶ್, ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.