ಭಾರತೀಯ ವೈದ್ಯಕೀಯ ಸಂಘ ಹಾಗೂ ಕರ್ನಾಟಕ ರಾಜ್ಯ ಮಾದಿಗ ಸಮಾಜ ಜಿಲ್ಲಾ ಘಟಕ ದ ವತಿಯಿಂದ ಎರಡನೇ ವರ್ಷದ ರಕ್ತದಾನ ಶಿಬಿರವನ್ನು ಮಾರ್ಚ್ 2 ರಂದು ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗ ನಗರದ ಮದಕರಿ ನಾಯಕ ಸರ್ಕಲ್ ಸಮೀಪ ಐಎಂಎ ಹಾಲ್ ನಲ್ಲಿ ಆಯೋಜಿಸಲಾಗುತ್ತದೆ.
ರಕ್ತದಾನ ಶಿಬಿರಕ್ಕೂ ಮುನ್ನ ಬೆಳಗ್ಗೆ 10.30 ರಿಂದ 11:30 ರವರೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಕೇಂದ್ರ ಸಾಮಾಜೀಕರಣ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ಉದ್ಘಾಟನೆ ನೆರವೇರಿಸುವರು. ಕಾರ್ಯಕ್ರಮದಲ್ಲಿ ಪ್ರತಿನಿಧಿಗಳು ಅಧಿಕಾರಿಗಳು ವಿವಿಧ ಗಣ್ಯರು ಭಾಗವಹಿಸಲು ಎಂದು ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.