ಜಿಲ್ಲಾ ಕುರುಬ ಸಂಘದ ವತಿಯಿಂದ ಬಾಲರಾಜ್ ಅರಸು ರಸ್ತೆಯಲ್ಲಿರುವ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಾಲಿನ ಬಜೆಟ್ ನಲ್ಲಿ 3 ಕೋಟಿ ರೂಪಾಯಿಗಳನ್ನು ಘೋಷಣೆ ಮಾಡಿ ಬಿಡುಗಡೆ ಮಾಡಿದ್ದಾರೆ.
ಅನುದಾನಕ್ಕೆ ಕಾರಣೀಭೂತರಾದ ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪನವರನ್ನು ಶಿವಮೊಗ್ಗದ ಸ್ವಗೃಹದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕುರುಬ ಸಂಘದ ಅಧ್ಯಕ್ಷರು ಮೈಲಾರಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಆರ್ ಪ್ರಸನ್ನ ಕುಮಾರ್, ಸಮಾಜದ ರಾಜ ಮುಖಂಡರಾದ ಎಂ ಶ್ರೀಕಾಂತ್, ಮಾಜಿ ಮಹಾಪೌರ ಎಸ್ ಕೆ ಮರಿಯಪ್ಪ, ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಉಪಾಧ್ಯಕ್ಷ ಕೆ ರಂಗನಾಥ್ ಇನ್ನು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.