ಚಿತ್ರದುರ್ಗ ಎಲೆಕ್ಟ್ರಿಕ್ ಸ್ಕೂಟರ್ ಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ಚಿತ್ರದುರ್ಗ ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 4 ರ ಮೆದೇಹಳ್ಳಿ ಹೈವೇ ಅಂಡರ್ ಬ್ರಿಡ್ಜ್ ಮೇಲೆ ಇಂದು ಅಂಜೆ 4:40 ರ ವೇಳೆಗೆ ಈ ದುರಂತ ಸಂಭವಿಸಿದೆ.ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ಹನುಮಂತಪ್ಪ (62) ಮೃತವ್ಯಕ್ತಿ. ದಾವಣಗೆರೆ ಕಡೆಗೆ ಹೋಗುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಬೊಲೇರೋ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿದ್ದ ಹನುಮಂತಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಈ ಪ್ರಕರಣವು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.