Breaking
Mon. Dec 23rd, 2024

ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ಕೋರ್ಟ್ನಿಂದ ತಡೆಯಾಜ್ಞೆ ತಂದ ಜಗ್ಗೇಶ್

ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ (Jaggesh) ಅವರು ಸಿನಿಮಾ ಕೆಲಸ ಹಾಗೂ ರಾಜಕೀಯ ಎರಡನ್ನೂ ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಾಗೂ ಕೆಲವು ಸುದ್ದಿ ಮಾಧ್ಯಮಗಳಲ್ಲಿ ಅವರ ಬಗ್ಗೆ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಇವರಿಗೆ ಜಗ್ಗೇಶ್ ಬಿಸಿ ಮುಟ್ಟಿಸಿದ್ದಾರೆ. ಇಂಥವರ ವಿರುದ್ಧ ಜಗ್ಗೇಶ್ ಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಿರುದ್ಧ ಅವಹೇಳನಾಕಾರಿ ಸುದ್ದಿ ಪ್ರಕಟ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.

ನಟ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳ ಪ್ರಶ್ನೆಗೆ ಹಲವು ಬಾರಿ ಉತ್ತರಿಸಿದ್ದಿದೆ. ಇದರ ಜೊತೆಗೆ ಅವರು ತಮ್ಮ ಸಿನಿಮಾಗಳ ಬಗ್ಗೆ, ರಾಜಕೀಯ ವಿಚಾರಗಳ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಾ ಇರುತ್ತಾರೆ. ಇದೇ ಸೋಶಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಬಗ್ಗೆ ಕೆಲವರು ಅಪಪ್ರಚಾರ ಮಾಡಿದ್ದಿದೆ. ಕೆಲವು ಸುದ್ದಿ ಮಾಧ್ಯಮಗಳು ಜಗ್ಗೇಶ್ನ ಟೀಕಿಸಿದ್ದಿದೆ. ಇದಕ್ಕೆ ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ.

ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ, ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ. ಇದು ತಾತ್ಕಾಲಿಕ ಆದೇಶವಾಗಿದೆ. ಏಪ್ರಿಲ್ 25ಕ್ಕೆ ಮುಂದಿನ ವಿಚಾರಣೆ ಇದೆ. ಜಗ್ಗೇಶ್ ಪರ ವಕೀಲರು ಇದನ್ನು ಎಲ್ಲರ ಗಮನಕ್ಕೆ ತಂದಿದ್ದಾರೆ.

ಜಗ್ಗೇಶ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಾಸ್ಯ ಪಾತ್ರಗಳನ್ನು ಮಾಡಿ ಗಮನ ಸೆಳೆದ ಅವರು ನಂತರ ಹೀರೋ ಆಗಿ ಮಿಂಚಿದರು. ನಿರ್ದೇಶಕನಾಗಿ, ಗಾಯಕನಾಗಿಯೂ ಅವರು ಹೆಸರು ಮಾಡಿದ್ದಾರೆ. ಕಳೆದ ವರ್ಷ ಅವರ ನಟನೆಯ ‘ರಾಘವೇಂದ್ರ ಸ್ಟೋರ್ಸ್’, ‘ತೋತಾಪುರಿ 2’ ಸಿನಿಮಾಗಳು ರಿಲೀಸ್ ಆಗಿವೆ. ಈಗ ‘ರಂಗನಾಯಕ’ ಸಿನಿಮಾ ಬರುತ್ತಿದೆ. ಈ ಚಿತ್ರಕ್ಕೆ ‘ಮಠ’ ಖ್ಯಾತಿಯ ಗುರುಪ್ರಸಾದ್ ನಿರ್ದೇಶನ ಮಾಡಿದ್ದಾರೆ.

Related Post

Leave a Reply

Your email address will not be published. Required fields are marked *