ಐಎಎಸ್ ಅಧಿಕಾರಿ ಕಮ್ ‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ (K.Shivaram) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರ ಆರೋಗ್ಯ ವಿಚಾರಿಸಲು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B. S. Yediyurappa), ಮಾಜಿಮಂತ್ರಿ ಸೋಮಣ್ಣ ಸೇರಿದಂತೆ ಮತ್ತಿತರರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಶಿವರಾಮ್ ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಅಳಿಯ ಪ್ರದೀಪ್ (Actor Pradeep) ನಿನ್ನೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಕಂಡೀಷನ್ ಕ್ರಿಟಿಕಲ್ ಆಗಿದೆ ಎಂದಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಫೆ.3ರಂದು ಕೆ.ಶಿವರಾಮ್ ಅವರನ್ನು ದಾಖಲಾಗಿದ್ದರು. ಕಳೆದ 6 ದಿನಗಳ ಹಿಂದೆ ಶಿವರಾಮ್‌ಗೆ ಹೃದಯಾಘಾತವಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನಡೆಯುತ್ತಿದೆ ಎನ್ನಲಾಗಿದೆ. ಇದೀಗ ಮಾವನನ್ನು ನೋಡಲು ನಟ ಪ್ರದೀಪ್ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ, ಬಿಪಿ ಏರುಪೇರಾಗಿತ್ತು. ಈಗಲೂ ಅವರ ಬಿಪಿ ನಾರ್ಮಲ್ ಆಗ್ತಿಲ್ಲ. ಅವರ ಸ್ಥಿತಿ ಕ್ರಿಟಿಕಲ್ ಆಗಿದೆ ಎಂದು ನಟ ಪ್ರದೀಪ್ ಮಾಹಿತಿ ನೀಡಿದ್ದಾರೆ. ಅವರ ಆರೋಗ್ಯಕ್ಕಾಗಿ ಇಷ್ಟಪಡುವಂತಹ ಅಭಿಮಾನಿಗಳು ದೇವರನ್ನು ಪ್ರಾರ್ಥಿಸಿ ಎಂದು ಪ್ರದೀಪ್ ಮನವಿ ಮಾಡಿದ್ದಾರೆ.
ಎಚ್.ಸಿ.ಜಿ ಆಸ್ಪತ್ರೆಯಲ್ಲಿ (Hospital) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡದಲ್ಲೇ ಐಎಎಸ್ ಬರೆದು, ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ.
ನಂತರ ‘ಬಾ ನಲ್ಲೆ ಮಧುಚಂದ್ರಕೆ’, ವಸಂತ ಕಾವ್ಯದಂತಹ ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಾಂಗ್ಲಿಯಾನ 3 ಚಿತ್ರದಲ್ಲಿ ಇವರದ್ದು ಖಳನಾಯಕನ ಪಾತ್ರ. ಹತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಶಿವರಾಮ್, ತಮ್ಮ ಮಗಳನ್ನು ನಟ ಪ್ರದೀಪ್ ಅವರಿಗೆ ಧಾರೆಯರೆದಿದ್ದರು.