ಶಿವರಾಮ್ ಅವರ ರಾಜಾಜಿನಗರದಲ್ಲಿ ಇರುವ ಮನೆಯಲ್ಲಿ ಪಾರ್ಥಿವ ಶರೀರ ಇಡಲಾಗಿದೆ. ಇವರಿಗೆ ಸಂಬಂಧಿಕರು ಹಾಗೂ ಕುಟುಂಬದವರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಬೆಳಿಗ್ಗೆ 9 ಗಂಟೆ ವೇಳೆಗೆ ಪಾರ್ಥಿವ ಶರೀರ ಟೌನ್ಹಾಲ್ ಬಳಿ ಇರುವ ರವೀಂದ್ರ ಕಲಾಕ್ಷೇತ್ರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಗಣ್ಯರು, ಕಲಾವಿದರು ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಟ ಶಿವರಾಮ್ (Shivaram) ಅವರು ಫೆಬ್ರವರಿ 29ರಂದು ನಿಧನ ಹೊಂದಿದರು. ಐಎಎಸ್ ಅಧಿಕಾರಿಯಾಗಿ, ರಾಜಕಾರಣಿಯಾಗಿ, ನಟನಾಗಿ ಅವರು ಗುರುತಿಸಿಕೊಂಡಿದ್ದರು. ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು. ಶಿವರಾಮ್ ಅವರ ರಾಜಾಜಿನಗರದಲ್ಲಿ ಇರುವ ಮನೆಯಲ್ಲಿ ಪಾರ್ಥಿವ ಶರೀರ ಇಡಲಾಗಿದೆ. ಇವರಿಗೆ ಸಂಬಂಧಿಕರು ಹಾಗೂ ಕುಟುಂಬದವರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಬೆಳಿಗ್ಗೆ 9 ಗಂಟೆ ವೇಳೆಗೆ ಪಾರ್ಥಿವ ಶರೀರ ಟೌನ್ಹಾಲ್ ಬಳಿ ಇರುವ ರವೀಂದ್ರ ಕಲಾಕ್ಷೇತ್ರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಗಣ್ಯರು, ಕಲಾವಿದರು ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶಿವರಾಮ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಕೋರಿಕೊಂಡಿದ್ದಾರೆ. ಸಿನಿಮಾಗಳಲ್ಲಿ ನಟನಾಗಿ ಮಿಂಚಿದ ಏಕೈಕ ಐಎಎಸ್ ಅಧಿಕಾರಿ ಎನ್ನುವ ಖ್ಯಾತಿ ಅವರಿಗೆ ಇದೆ.