ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ, ಗುಪ್ತಚರ ಇಲಾಖೆ ಹೆಚ್ಚು ಜಾಗೃತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು
ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಇಂತಹ ಘಟನೆಗಳನ್ನು ಎಚ್ಚರಿಕೆ ವಹಿಸಿ ನಂತರ ಮರೆಯುವಂತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕಬೇಕು ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್, ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್, ಮೊದಲಾದವರು.