ಚಿತ್ರದುರ್ಗದಲ್ಲಿ ಟೈಲರಿಂಗ್ ತರಬೇತಿ ಪಡೆಯುವ ಮೂಲಕ ಸ್ವಾವಲಂಬಿಯಾಗಿ ಬದುಕುವುದರ ಜೊತೆಗೆ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ಗೀತ ಬಿ. ಹೇಳಿದರು.
ಸಿರಿಗೆರೆ ಯೋಜನಾ ಕಛೇರಿ ವ್ಯಾಪ್ತಿಯ ಹಿರೇಗುಂಟನೂರು ವಲಯದ ಕುರುಬರಹಳ್ಳಿಯ ಜ್ಞಾನವಿಕಾಸ ಕೇಂದ್ರದಲ್ಲಿ ಮೂರು ತಿಂಗಳ ಕಾಲ ಕಾಲಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಏರ್ಪಡಿಸಿದ್ದ ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭದಲ್ಲಿ 25 ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಕೇವಲ ಅಡುಗೆ ಮನೆಗಷ್ಟೇ ಮಹಿಳೆಯರು ಮೀಸಲಾಗದೆ ಇಂತಹ ಯೋಜನೆಗಳನ್ನು ಸದಯಪಯೋಗಪಡಿಸಿಕೊಂಡು ಜೀವನದಲ್ಲಿ ಮುಂದೆ ಬರುವಂತೆ ಮಾಡಿದರು.
ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ತಾಲ್ಲೂಕು ಯೋಜನಾಧಿಕಾರಿ ಪ್ರವೀಣ್ ಎ.ಜೆ. ಹೊಲಿಗೆ ತರಬೇತಿ ಕೇಂದ್ರದ ಶಿಕ್ಷಕಿ ಶ್ರೀಮತಿ ಸಾಹೇರಭಾನು, ವಲಯ ಮೇಲ್ವಿಚಾರಕಿ ನಿಂಗಮ್ಮ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಶಿವಲೀಲಾ ಎಸ್.ಬಾಗೋಡಿ, ಸೇವಾಪ್ರತಿನಿಧಿ ವಸಂತ, ಈ ಸಂದರ್ಭದಲ್ಲಿದ್ದರು.