Breaking
Tue. Dec 24th, 2024

ಲೋಕಸಭಾ ಚುನಾವಣೆಗೆ ಕೇವಲ 50-60 ದಿನಗಳು ಮಾತ್ರ ಬಾಕಿ ಇದೆ. ಬಿಜೆಪಿ- ಜೆಡಿಎಸ್ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲಲು ಶಪಥ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ…!

ಬೆಳಗಾವಿ : ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷ ನಮ್ಮದು. ಅಣ್ಣಾಸಾಹೇಬ್ ಜೊಲ್ಲೆಯವರು ಸೇರಿ 303 ಸಂಸದರು ನಮ್ಮ ಪಕ್ಷದವರು ಲೋಕಸಭೆಯಲ್ಲಿದ್ದಾರೆ. ನಮ್ಮ ಯುವಜನರಿಗೆ ತರಬೇತಿ ನೀಡಿ ಪ್ರಧಾನಿ ಮೋದಿಯವರು ಆತ್ಮನಿರ್ಭರರನ್ನಾಗಿ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು.

ಚಿಕ್ಕೋಡಿಯಲ್ಲಿ ಇಂದು ಬಿಜೆಪಿ ಬೂತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದರು.

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ನಮ್ಮ ಸರಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ. ಬಡವರು, ಮಹಿಳೆಯರು (ನಾರಿಶಕ್ತಿ), ರೈತರು, ಯುವಜನತೆಯ ಆಶಯಗಳನ್ನು ಈಡೇರಿಸಿದ ಪಕ್ಷವಾಗಿ ಬಿಜೆಪಿ ಬೆಳೆದಿದೆ. ಬಿಜೆಪಿ ಸಿದ್ಧಾಂತ ಆಧರಿಸಿದ ಪಕ್ಷ ಮುಸ್ಲಿಮ್ ಮಹಿಳೆಯರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ನಾವು ಹೇಳಿದ್ದೆವು. ತ್ರಿವಳಿ ತಲಾಖ್ ಪದ್ಧತಿಯನ್ನು ನಾವು ರದ್ದು ಮಾಡಿದ್ದೇವೆ.

ಕಾಂಗ್ರೆಸ್ ಪಕ್ಷ ತುಷ್ಟೀಕರಣದ ಕಾರಣಕ್ಕಾಗಿ ಈ ಕಡೆ ಗಮನ ಹರಿಸಿರಲಿಲ್ಲ ಎಂದು ವಿವರಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಲೋಕಸಭಾ ಚುನಾವಣೆಗೆ ಕೇವಲ 50-60 ದಿನಗಳು ಮಾತ್ರ ಬಾಕಿ ಇದೆ. ಬಿಜೆಪಿ- ಜೆಡಿಎಸ್ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲಲು ಶಪಥ ಮಾಡಿ ಹೊರಟಿದ್ದೇನೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲಿಸಲು ಮನವಿ ಮಾಡಿದರು. 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಭರವಸೆಯನ್ನು ನಡ್ಡಾಜೀ ಅವರಿಗೆ ನೀಡುವುದಾಗಿ ವಿಶ್ವಾಸದಿಂದ ನುಡಿದರು.

ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ, ಶಾಸಕ ರಮೇಶ್ ಕತ್ತಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ್ ಅಪ್ಪಾಜಿಗೋಲ್, ಲೋಕಸಭಾ ಚುನಾವಣೆ ರಾಜ್ಯ ಉಸ್ತುವಾರಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ವಿಭಾಗ ಸಹ ಪ್ರಭಾರಿ ಬಸವರಾಜ ಯಂಕಂಚಿ, ಎಸ್‍ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ, ವಿಧಾನಪರಿಷತ್ ಮಾಜಿ ಸದಸ್ಯ ಮಹಂತೇಶ್ ಕವಟಗಿಮಠ, ಮಾಜಿ ಶಾಸಕ ಅಭಯ್ ಪಾಟೀಲ್, ಶಾಸಕರಾದ ದುರ್ಯೋಧನ ಐಹೊಳೆ, ನಿಖಿಲ್ ಕತ್ತಿ, ಮಾಜಿ ಶಾಸಕ ಶ್ರೀಮಂತ ಪಾಟೀಲ್, ಮಾಜಿ ಶಾಸಕ ಮಹೇಶ್ ಕುಮಟ್ಟಳ್ಳಿ , ವಿಭಾಗ ಪ್ರಭಾರಿ ಚಂದ್ರಶೇಖರ್ ಕವಟಗಿ, ಶಾಸಕ ಅಭಯ್ ಪಾಟೀಲ್, ಮತ್ತು ಹನುಮಂತ ನಿರಾಣಿ ಮತ್ತಿತರ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *