ತುಮಕೂರು : ಮಾ. 9ರಂದು ನಿಗದಿತ ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮಾ.16ಕ್ಕೆ ಮುಂದೂಡಲಾಗಿದೆ ಎಂದು ಕೆಎಸ್‌ಎಲ್ ಎಸ್‌ಎ ಸದಸ್ಯ ಕಾರ್ಯದರ್ಶಿ ಜೈಶಂಕರ್ ಪ್ರಕಟಣೆಯಲ್ಲಿ ಪ್ರಕಟಿಸಲಾಗಿದೆ. ಮಾ.16ರಂದು ನಡೆಯಲಿರುವ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿಯಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಪಕ್ಷಗಾರರ ರಾಜಿ ಸಂಧಾನದ ಮೂಲಕ ಆಯ್ಕೆ ಮಾಡಲಾಗಿದೆ.
ಲೋಕ ಅದಾಲತ್‌ನಲ್ಲಿ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿ, ಜಲಮಂಡಳಿ ಇತರೆ ನ್ಯಾಯಾಲಯಕ್ಕೆ ಬರಬಹುದಾದ ಪ್ರಕರಣಗಳು ಪೂರ್ವ ವ್ಯಾಜ್ಯ ಪ್ರಕರಣಗಳಿಗೆ ಕಾರಣವಾಗಿವೆ. ಈ ಪ್ರಕರಣಗಳಲ್ಲಿ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜಿ ಸಂದ ಮೂಲಕ ವಿವಾದಗಳನ್ನು ಬಗೆಹರಿಸಿ ತೀರ್ಪು ನೀಡಲಾಗುವುದು.
ಅಂತಹ ತೀರ್ಪುಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್ ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ, ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಮತ್ತು ಸಮಯ ಉಳಿತಾಯವಾಗುತ್ತದೆ. ಶೀಘ್ರವಾಗಿ ನ್ಯಾಯ ಪಡೆಯಲು ಸಹ ಸಾಧ್ಯವಿಲ್ಲ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಇಮೈಲ್ ಅನ್ನ ಸಂಪರ್ಕಿಸಿ dlsatumakur1@gmail.com ಅನ್ನು ಅಥವಾ ಕಚೇರಿಯ ದೂರವಾಣಿ ಸಂಖ್ಯೆ : 0816 2255133 ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳ ದೂರವಾಣಿ ಸಂಖ್ಯೆ : 9141193959 ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಉಚಿತ ಸಹಾಯವಾಣಿ : 180042590900 ಗೆ ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.