Breaking
Mon. Dec 23rd, 2024

ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಆನ್ಲೈನ್ ಸೇವೆಗಳು ಇರುವುದಿಲ್ಲ ; ಬಿಲ್ ಪಾವತಿಗೆ 20ರ ನಂತರ ಅವಕಾಶ .

ಇಂಧನ ಇಲಾಖೆಯ ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆಯಲ್ಲಿ ಮಾರ್ಚ್ 10ರಿಂದ ಒಟ್ಟು 10ದಿನಗಳ ಕಾಲ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಆನ್ಲೈನ್ ಸೇವೆಗಳು ಇರುವುದಿಲ್ಲ. ಹಾಗಾದ್ರೆ, ಯಾವ ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್‌ಲೈನ್ ಸೇವೆ ಇರುವುದಿಲ್ಲ ಎನ್ನುವ ವಿವರ ಈ ಕೆಳಗಿನಂತಿದೆ.

ಬೆಂಗಳೂರು, (ಮಾರ್ಚ್ 06): ಇಂಧನ ಇಲಾಖೆಯ ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು (Escom Online Services) ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ.

ಆನ್‌ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ. ಸಾಫ್ಟ್ವೇರ್ ಅಪ್ಡೇಟ್ ಬಳಿಕ ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟಿಗೆ ವ್ಯತ್ಯಯ ಉಂಟಾಗಬಹುದು ಎಂದು ತಿಳಿಸಿದೆ.

ಸಾಫ್ಟ್‌ವೇರ್ ಅಪ್ಡೇಟ್ ಸಂದರ್ಭದಲ್ಲಿ ಆನ್ಲೈನ್ನಲ್ಲಿ ವಿದ್ಯುತ್ ಬಿಲ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲ. ಆದ್ರೆ, ಈ ಸಂದರ್ಭದಲ್ಲಿ ವಿದ್ಯುತ್ ಬಿಲ್‌ ನೀಡಲಿದ್ದು, ಈ ಬಿಲ್‌ ಅನ್ನು ಮಾರ್ಚ್ 20ರ ನಂತರವೇ ವೆಬ್ಸೈಟ್ನಲ್ಲಿ ಅಪಲೋಡ್ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದೆ.

ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಆನ್ಲೈನ್ ಸೇವೆಗಳು ಇರುವುದಿಲ್ಲ. ಹಾಗಾದ್ರೆ, ಯಾವ ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್‌ಲೈನ್ ಸೇವೆ ಇರುವುದಿಲ್ಲ ಎನ್ನುವ ವಿವರ ಈ ಕೆಳಗಿನಂತಿದೆ.

ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.

ಸೆಸ್ಕ್: ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆ‌ರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.

ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ: ಕಲಬುರಗಿ, ಮಾನ್ವಿ, ಸಿಂಧನೂರು, ಬೀದರ್, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

 

Related Post

Leave a Reply

Your email address will not be published. Required fields are marked *