Breaking
Mon. Dec 23rd, 2024

ಕಾರ್ಪೊರೇಟ್, ಬಂಡವಾಳಶಾಹಿಗಳ ಪರವಾಗಿರುವ ಕೇಂದ್ರ ಬಿಜೆಪಿ ಸರ್ಕಾರವನ್ನು ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಕಿತ್ತೊಗೆಯಬೇಕೆಂದು ರೈತ ನಾಯಕ ಬಡಗಲಪುರ ನಾಗೇಂದ್ರ ರೈತ ಕುಲಕ್ಕೆ ಕರೆ

ಚಿತ್ರದುರ್ಗದ ರೊಟರಿ ಬಾಲ ಭವನದ ಮುಂಭಾಗ ಬುಧವಾರ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ರೈತ ಕಾರ್ಮಿಕ ಪಂಚಾಯತ್‍ನಲ್ಲಿ ಭಾಗವಹಿಸಿ ಮಾತನಾಡಿದರು.

ದೆಹಲಿಯಲ್ಲಿ ಹದಿಮೂರು ತಿಂಗಳುಗಳ ಕಾಲ ರೈತರು ನಡೆಸಿದ ಚಳುವಳಿಯಲ್ಲಿ ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನೀಡುವುದಾಗಿ ಭರವಸೆ ಕೊಟ್ಟ ಪ್ರಧಾನಿ ಮೋದಿ ಇನ್ನು ಬೆಲೆ ನಿಗಧಿಪಡಿಸಿಲ್ಲ. ನರೇಗಾ ಯೋಜನೆಯಡಿ ನೂರು ದಿನಗಳ ಕಾಲ ಉದ್ಯೋಗ ಕೊಡಬೇಕು.

ಮನುಷ್ಯತ್ವವಿಲ್ಲದ ಕೇಂದ್ರ ಸರ್ಕಾರದಿಂದ ಯುವಕರಿಗೆ, ರೈತರಿಗೆ, ಕಾರ್ಮಿಕರಿಗೆ, ಮೋಸವಾಗುತ್ತಿದೆ. ಜನಸಾಮಾನ್ಯರ ಬದುಕನ್ನೆ ಕಿತ್ತುಕೊಳ್ಳುತ್ತಿರುವ ಕೇಂದ್ರ ಸರ್ಕಾರದಿಂದ ಇಂಡಿಯಾ ಉಳಿಯಲ್ಲ. ಮಾ.14 ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುವ ಮಹತ್ವದ ಸಭೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.

ಸಾಮಾಜಿಕ ಪರಿವರ್ತನಾ ಸಂಸ್ಥೆ ಅಧ್ಯಕ್ಷ ಎಸ್.ಆರ್.ಹಿರೇಮಠ್ ಮಾತನಾಡಿ ನರೇಂದ್ರಮೋದಿ ದೇಶದ ಪ್ರಧಾನಿಯಾದಾಗಿನಿಂದಲೂ ಅಘೋಷಿತ ತುರ್ತು ಪರಿಸ್ಥಿತಿಯಿರುವುದರಿಂದ ಗಂಭೀರವಾದ ಗಂಡಾಂತರಗಳನ್ನು ಎದುರಿಸುವಂತಾಗಿದೆ. ರೈತರು, ಕಾರ್ಮಿಕರು, ಶ್ರಮಿಕ ವರ್ಗದವರು ಪರಿತಪಿಸುತ್ತಿದ್ದಾರೆ.

ದುಡಿಯುವ ಕೈಗಳಿಗೆ ಕನಿಷ್ಠ ವೇತನ ಸಿಗುತ್ತಿಲ್ಲ. ಇದೆ ತಿಂಗಳ ಹದಿನಾಲ್ಕರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುವ ಮಹತ್ವದ ಸಭೆಯಲ್ಲಿ ಅನೇಕ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದು ತಿಳಿಸಿದರು.

ನರೇಂದ್ರಮೋದಿ ತನ್ನ ಪ್ರಭಾವ ಬಳಸಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ತಂದಿರುವುದು ದೊಡ್ಡ ಹಗರಣ. ರೈತರು, ಕಾರ್ಮಿಕರು, ಜನಸಾಮಾನ್ಯರು ಹಾಗೂ ದುಡಿಯುವ ವರ್ಗದ ಭವಿಷ್ಯ, ಅಸ್ತಿತ್ವ, ಸಂವಿಧಾನದ ಮೇಲೆ ನಿಂತಿದೆ. ಹಾಗಾಗಿ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಯನ್ನು ಅಧಿಕಾರದಿಂದ ದೂರವಿಡಬೇಕಿದೆ ಎಂದು ಹೇಳಿದರು.

ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡುತ್ತ 1998 ರಲ್ಲಿ ಅಪ್ಪರ್‍ಭದ್ರಾ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ಸಿಕ್ಕಿತು. ಆದರೆ ಅಂದಿನಿಂದ ಇಲ್ಲಿಯವರೆಗೂ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿದೆ. ನಾಲ್ಕು ಸಾವಿರ ಕೋಟಿ ರೂ.ಗಳ ಯೋಜನೆ ಈಗ 22 ಸಾವಿರ ಕೋಟಿಗೆ ಮುಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿವೆ.

ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಪಕ್ಷಗಳು ಚಿತ್ರದುರ್ಗ ಜಿಲ್ಲೆಗೆ ಪರಮ ಅನ್ಯಾಯವೆಸಗಿವೆ. ಅನೇಕ ಹೋರಾಟ, ಚಳುವಳಿ, ಧರಣಿ, ಪ್ರತಿಭಟನೆಗಳಾಗಿವೆ. ರಾಜಕಾರಣಿಗಳಿಗೆ ಇಚ್ಚಾಶಕ್ತಿಯಿಲ್ಲದ ಕಾರಣ ಅಪ್ಪರ್‍ಭದ್ರಾ ಯೋಜನೆ ಇನ್ನು ಜಾರಿಯಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಶಾಸಕರುಗಳ ಮನೆಗಳಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

ರೈತ ಕಾರ್ಮಿಕ ಪಂಚಾಯತ್ ತೆಗೆದುಕೊಳ್ಳುತ್ತಿರುವ ಆಗ್ರಹ ಪೂರ್ವಕ ನಿರ್ಣಾಯಕಗಳು

1 ರೈತರ ಆದಾಯವನ್ನು ದುಪ್ಪಟ್ಟು ಗೊಳಿಸುವ ಕಾರ್ಮಿಕರ ಹಿತ ಕಾಯುವ ಸಾಲು ಸಾಲು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರವು ದೇಶದ ದುಡಿಯುವ ಜನತೆಗೆ ಮಹಾ ದ್ರೋಹ ಎಸಗಿದೆ ಮತ್ತು ರೈತ ಕಾರ್ಮಿಕರ ಹಿತ ವನ್ನು ಕಾರ್ಪೊರೇಟ್ ಶಕ್ತಿಗಳಿಗೆ ಬಲಿ ಕೊಟ್ಟಿದೆ.

2. ಐತಿಹಾಸಿಕ ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಈ ಕೂಡಲೇ ಜಾರಿ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಒತ್ತಾಯಿಸುತ್ತದೆ. ಸಿಂಗ್ ಗಡಿಯಲ್ಲಿ ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಜಾಗ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು.

3. ಹೋರಾಟದ ಮುಂದಿನ ನಡೆಗಳನ್ನು ನಿರ್ಣಯ ಎಸಲು ಮಾರ್ಚ್ 14ರಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಬೃಹತ್ ರೈತರ ಕಾರ್ಮಿಕ ಪಂಚಾಯತ್ ಅಧಿವೇಶನ ಗೊಳ್ಳಲಿದೆ. ಎಲ್ಲ ರಾಜ್ಯದ ಪ್ರತಿನಿಧಿಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಕರ್ನಾಟಕದಿಂದ 1,500 ಜನ ಪ್ರತಿನಿಧಿಗಳು ಈ ಅಖಿಲ ಭಾರತ ಪಂಚಾಯತ್ ನಲ್ಲಿ ಹೋಗಿ ಭಾಗವಹಿಸಲು ಕೇಂದ್ರ ಸರ್ಕಾರಕ್ಕೆ ಅನುಮೂತಿ ಎಚ್ಚರಿಕೆ ನೀಡುತ್ತಿವೆ.

4. ರೈತರ ಉತ್ಪನ್ನಗಳಿಗೆ ಎಂ ಎಸ್ ಸ್ವಾಮಿನಾಥನ್ ಶಿಫಾರಸ್ಸಿನ  ಸೂತ್ರ C2+50% ಪ್ರಕಾರ ಕನಿಷ್ಠ ಬೆಂಬಲ ಬೆಲೆ ಹಾಗೂ ಖರೀದಿ ಖಾತ್ರಿ ಒದಗಿಸುವ ಶಾಸನ ಜಾರಿ ಮಾಡಬೇಕು. ರೈತರಿಗೆ ನೀಡುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ವಿದ್ಯುತ್ ಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಾಗಬೇಕು.

5. ಎಲ್ಲ ಸಾರ್ವಜನಿಕ ಉದ್ದಿಮೆಗಳ ಖಾಸಗಿಕರಣ ನಿಲ್ಲಬೇಕು. ರಾಷ್ಟ್ರೀಯ ನಾಗರೀಕರಣ ಪೈಪ್ ಲೈನ್ ಯೋಜನೆ ರದ್ದಾಗ ಬೇಕು.

6. ಕೋವಿಡ್ ನೆಪದಲ್ಲಿ ಹಿರಿಯ ನಾಗರಿಕರು, ಮಹಿಳೆಯರು, ಅಂಗವಿಕಲರು, ಕ್ರೀಡಾಪಟುಗಳಿಗೆ ರದ್ದುಪಡಿಸಿದ ರೈಲ್ವೆ ಪ್ರಮಾಣ ರಿಯಾಯಿತಿಯನ್ನು ಪುನರ್ ಸ್ಥಾಪಿಸಬೇಕು ರೈಲ್ವೆ ಖಾಸಗಿಕರಣ ನಿಲ್ಲಿಸಬೇಕು.

7. ಆಹಾರ ಭದ್ರತೆ ಪೋಷಕಾಂಶ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಬೇಕು. ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿಗೊಳಿಸಬೇಕು. ಜೀವನಾವಶ್ಯಕ ಅಗತ್ಯ ವಸ್ತುಗಳನ್ನು ಸಾರ್ವಜನಿಕ ವಿತರಣ ವ್ಯವಸ್ಥೆ ಮೂಲಕ ವಿತರಿಸಬೇಕು. ನೇರ ನಗದು ವರ್ಗಾವಣೆ ರದ್ದುಪಡಿಸಬೇಕು.

ಕಾರ್ಮಿಕ ಮುಖಂಡ ಅಪ್ಪಣ್ಣ ಮಾತನಾಡಿ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯಿಂದ ರೈತರು, ಕಾರ್ಮಿಕರು ದಲಿತರು ಪರಿತಪಿಸುತ್ತಿದ್ದಾರೆ. ಕಾರ್ಮಿಕರ ಪರವಾಗಿರುವ ಕಾನೂನುಗಳು ತಿದ್ದುಪಡಿಯಾಗುತ್ತಿವೆ. ಹೊಸ ಹೊಸ ಹೆಸರುಗಳು ಹುಟ್ಟಿಕೊಳ್ಳುತ್ತಿರುವುದರ ಹಿಂದೆ ದೊಡ್ಡ ಗೂಡಾಲೋಚನೆಯಿದೆ. ಸಾರ್ವಜನಿಕ ಉದ್ದಿಮೆಗಳು ಮಾರಾಟವಾಗುತ್ತಿವೆ. ವಿದ್ಯುತ್ ಖಾಸಗಿಕರಣಗೊಳಿಸಿ ರೈತರು ಕಾರ್ಮಿಕರನ್ನು ಕಟ್ಟಿ ಹಾಕಲಾಗುತ್ತಿದೆ. ಇದರ ವಿರುದ್ದ ಎಚ್ಚೆತ್ತುಕೊಳ್ಳಬೇಕೆಂದರು.

ಯಶವಂತ್ ಮಾತನಾಡುತ್ತ ರೈತರನ್ನು ಸರ್ವನಾಶಗೊಳಿಸುವ ಸುಗ್ರಿವಾಜ್ಞೆ ತರಲು ಕೇಂದ್ರ ಮುಂದಾಗಿದೆ. ಪಂಜಾಬ್ ಹರಿಯಾಣ ರೈತರು ಹೋರಾಟಕ್ಕೆ ಇಳಿದಿದ್ದಾರೆ. ವಚನದ್ರೋಹಿ ಪ್ರಧಾನಿ ನರೇಂದ್ರಮೋದಿ ರೈತರು ಕಾರ್ಮಿಕರ ಯಾವ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಋಣಮುಕ್ತ ತನ್ನಿ ಎಂದು ರೈತರು ಕೇಳುತ್ತಿದ್ದಾರೆ. ಮತ್ತಿನ್ನೇನು ಅಲ್ಲ. 554 ಸಂಘಟನೆಗಳು ರೈತರ ಚಳುವಳಿಗೆ ಬೆಂಬಲ ಸೂಚಿಸಿವೆ. ಒಂದು ಸಾವಿರ ರೈತರು ಕರ್ನಾಟಕದಿಂದ ಹೋಗುತ್ತೇವೆಂದು ತಿಳಿಸಿದರು.

ಸತ್ಯಪ್ಪ ಮಲ್ಲಾಪುರ, ಮಲಿಯಪ್ಪ, ಸಿ.ಕೆ.ಗೌಸ್‍ಪೀರ್, ಕಾರ್ಮಿಕ ಮುಖಂಡ ಜಿ.ಸಿ.ಸುರೇಶ್‍ಬಾಬು, ವೈ.ಕುಮಾರ್, ತಿಪ್ಪೇಸ್ವಾಮಿ, ರೈತ ನಾಯಕ ಹೆಚ್.ಆರ್.ಬಸವರಾಜಪ್ಪ, ಮಂಜುಳ ಅಕ್ಕಿ, ಕುಮಾರ್ ಸಮತಳ ಇನ್ನು ಅನೇಕರು ವೇದಿಕೆಯಲ್ಲಿದ್ದರು.

Related Post

Leave a Reply

Your email address will not be published. Required fields are marked *