Breaking
Tue. Dec 24th, 2024

ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರಾ ಮಹೋತ್ಸವ ಇದೇ ತಿಂಗಳ ಮಾರ್ಚ್ 27 ರಿಂದ 30 ರವರೆಗೆ ಅದ್ದೂರಿಯಾಗಿ ಜರುಗಲಿದೆ

ದಾವಣಗೆರೆ : ಇದು ಜಾತ್ರೆಗಳ ಸಮಯ. ದಾವಣಗೆರೆ ಜಿಲ್ಲೆಯಲ್ಲೂ ಜಾತ್ರೆಗಳು ಶಯರುವಾಗಿವೆ. ಅದರಲ್ಲೂ ಮೂರು ವರ್ಷಗಳಿಗೊಮ್ಮೆ ನಡೆಯುವ ಜಾತ್ರಾ ಮಹೋತ್ಸವ ಶುರುವಾಗಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರಾ ಮಹೋತ್ಸವ ಇದೇ ತಿಂಗಳ ಮಾರ್ಚ್ 27 ರಿಂದ 30 ರವರೆಗೆ ಅದ್ದೂರಿಯಾಗಿ ಜರುಗಲಿದೆ.

ಈಗಾಗಲೇ ಈ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯಾ ಸಿದ್ಧತೆಗಳು ನಡೆದಿವೆ.ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಜಾತ್ರೆಗೆ ಸೇರಲಿದ್ದಾರೆ. ಹೀಗಾಗಿ ಮೂಲಭೂತ ಸೌಕರ್ಯವನ್ನು ಕಲ್ಪಿಸಬೇಕಾಗುತ್ತದೆ. ಈ ಸಂಬಂಧ ಶಾಸಕ ಹಾಗೂ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಜಾತ್ರೆಯ ಸಮಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಬರುತ್ತಾರೆ. ಸಂಚಾರ, ನೀರಿನ ವ್ಯವಸ್ಥೆ, ಬಂದೋಬಸ್ತ್, ವಿದ್ಯುತ್ ಪೂರೈಕೆ, ಶೌಚಾಲಯ ಸೇರಿದಂತೆ ಜಾತ್ರೆಗೆ ಬೇಕಾದ ಎಲ್ಲಾ ನೆರವು ನೀಡಲು ಮನವಿ ಮಾಡಲಾಗಿದೆ.

ಮಾರ್ಚ್ 17ರಂದು ಬೆಳಗ್ಗೆ ದೇವಿಗೆ ಪಂಚಾಮೃತ ಅಭಿಷೇಕ, ರಾತ್ರಿ 8ಗಂಟೆಗೆ ಕಂಕಣಧಾರಣೆ, ನಂತರ ಕೋಣದೊಂದಿಗೆ ನಗರದಲ್ಲಿ ಸಾರುವುದು, 18, 19ರಂದು ದೇವಿಗೆ ವಿಶೇಷ ಅಲಂಕಾರ, ಭಕ್ತಿ ಸಮರ್ಪಣೆ, 20ರಂದು ಮುಂಜಾನೆ ಚರಗ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ ಪ್ರತಿ ವರ್ಷದಂತೆ ಕುರಿಕಾಳಗ, ಕುಸ್ತಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಕುರಿ ಕಾಳಗದ ವೇಳೆ ಈ ಹಿಂದೆ ಜಗಳ, ಗಲಾಟೆ ನಡೆದಿದ್ದು, ಈ ಕಾರಣಕ್ಕೆ ಕುರಿ ಕಾಳಗ ನಡೆಸುವಂತಿಲ್ಲ ಎಂದು ಸಮಿತಿಯವರು ಹೇಳುತ್ತಿದ್ದಂತೆ ಇದಕ್ಕೆ ಆಕ್ಷೇಪ ವ್ಯಕ್ತವಾಯಿತು. ಈಗಾಗಲೇ ಯುವಕರು ಸೇರಿದಂತೆ ಹಲವರು ಈಗಾಗಲೇ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕುರಿಗಳನ್ನು ಕಾಳಗಕ್ಕೆ ತಯಾರು ಮಾಡಿದ್ದಾರೆ.

ಜಾತ್ರೆಯನ್ನು ಸರ್ಕಾರ ಹೇಳಿದ ರೀತಿ ಮಾಡಲಾಗುತ್ತದೆ. ಪ್ರಾಣಿ ಬಲಿ ನೀಡದೆ, ಮೌಢ್ಯಾಚರಣೆ ಮಾಡದೆ, ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಮೂಲಕ ನಗರ ದೇವತೆ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಬೇಕು ಎಂದಿದ್ದಾರೆ.

Related Post

Leave a Reply

Your email address will not be published. Required fields are marked *