School Board Exams : ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಹೊರಡಿಸಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ. ಅಲ್ಲದೇ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಅನುಮತಿ ನೀಡಿದೆ.
ಶಾಲೆಗಳ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ (School Board Exam) ಅನುಮತಿ ಕರ್ನಾಟಕ ಹೈಕೋರ್ಟ್ (Karnataka High Court Division bench) ಅನುಮತಿ ನೀಡಿ ಆದೇಶ ಹೊರಡಿಸಿದೆ. ಹೈಕೋರ್ಟ್ನ ಏಕಸದಸ್ಯ ಪೀಠದ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆಹಿಡಿದಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಇದರಿಂದ ಸರ್ಕಾರ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.