ನವದೆಹಲಿ, (ಮಾರ್ಚ್ 08): ಈಗ ಕಾಂಗ್ರೆಸ್ ಎಷ್ಟು ಪಟ್ಟಿ ಬಿಡುಗಡೆ ಮಾಡುತ್ತದೆ ಎಂಬುದು ಸದ್ಯದ ಕುತೂಹಲವಾಗಿದೆ. ಒಂದಾ, ಎರಡೇ? ಮೂರೇ? ಹೀಗೆ ಎಷ್ಟು ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂಬುದು ಸದ್ಯದ ಕುತೂಹಲವಾಗಿದೆ. ಕೆಲವು ಕ್ಷೇತ್ರಗಳಿಗೆ ಪ್ರಬಲ ಅಭ್ಯರ್ಥಿಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೆಲವು ಕಡೆ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಲಾಗಿದೆ. ಈಗ ಬಿಜೆಪಿ 28 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡುವವರೆಗೂ ಕೈಪಡೆ ಕಾಯಲಿದೆ. ಹೀಗಾಗಿ ಎರಡು ಪಟ್ಟಿ ಬಿಡುಗಡೆ ಮಾಡಲಿರುವ ಕಾಂಗ್ರೆಸ್, ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬ ಮಾಡಲಿದೆ.
ಲೋಕಸಭಾ ಚುನಾವಣೆಗೆ (ಲೋಕಸಭಾ ಚುನಾವಣೆ 2024) ಕಾಂಗ್ರೆಸ್ (ಕಾಂಗ್ರೆಸ್) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸರಣಿ ಸಭೆಗಳ ನಂತರ ಅಂತಿಮವಾಗಿ ಇಂದು (ಮಾರ್ಚ್ 08) ನವದೆಹಲಿಯ ಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಾಕೆನ್, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಕರ್ನಾಟಕದ 8, ತೆಲಂಗಾಣದ 4, ಛತ್ತೀಸ್ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಪ್ರಕಟಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಶಶಿ ತರೂರ್ ಅವರಿಗೆ ತಿರುವನಂತಪುರಂ ಕ್ಷೇತ್ರದ ಟಿಕೆಟ್ ಕೊಡುಗೆ. ಇನ್ನು ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ವಿಜಯಪುರ, ಶಿವಮೊಗ್ಗ, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ, ಹಾವೇರಿ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ.
ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ
ಶಿವಮೊಗ್ಗ- ಗೀತಾ ಶಿವರಾಜ್ ಕುಮಾರ್
ತುಮಕೂರು- ಎಸ್ಪಿ ಮುದ್ದಹನುಮೇಗೌಡ
ಚಿತ್ರದುರ್ಗ-ಬಿ ಎನ್ ಚಂದ್ರಪ್ಪ
ಮಂಡ್ಯ- ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
ಹಾಸನ- ಶ್ರೇಯಸ್ ಪಟೇಲ್
ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್
ವಿಜಯಪುರ- ಎಚ್‌ಆರ್ ಅಲ್ಗೂರ್
ಹಾವೇರಿ: ಆನಂದ್ ಸ್ವಾಮಿ ಗಡ್ಡ ದೇವರಮಠ
ತೆಲಂಗಾಣದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ
ಈ ಪಟ್ಟಿಯಲ್ಲಿ ತೆಲಂಗಾಣದ ನಾಲ್ಕು ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಜಹೀರಾಬಾದ್ ಕ್ಷೇತ್ರ- ಸುರೇಶ್ ಕುಮಾರ್ ಶೆಟ್ಕರ್, ಚೇವೆಲ್ಲಾ ಕ್ಷೇತ್ರ ಸುನೀತಾ ಮಹೇಂದರ್ ರೆಡ್ಡಿ, ನಲ್ಗೊಂಡ ಕ್ಷೇತ್ರ- ಕುಂದೂರು ರಘುವೀರ್, ಮಹಬೂಬಾಬಾದ್ ಕ್ಷೇತ್ರ (ಎಸ್‌ಟಿ) ಪೋರಿಕ ಬಲರಾಮ್ ನಾಯಕ್‌ಗೆ ಟಿಕೆಟ್ ನೀಡಿದ್ದಾರೆ.
ಕೇರಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ
ವಯನಾಡ್ (ಕೇರಳ): ರಾಹುಲ್ ಗಾಂಧಿ
ಕಾಸರಗೋಡು (ಕೇರಳ): ರಾಜಮೋಹನ್ ಉಣ್ಣಿತ್ತಾನ್
ಕಣ್ಣೂರು (ಕೇರಳ): ಕೆ ಸುಧಾಕರನ್
ವಡಕರ (ಕೇರಳ): ಶಫಿ ಪರಂಬಿಲ್
ಕೋಝಿಕೋಡ್ (ಕೇರಳ): ಎಂಕೆ ರಾಘವನ್
ಪಾಲಕ್ಕಾಡ್ (ಕೇರಳ): ವಿಕೆ ಶ್ರೀಕಂಠನ್
ಅಲತೂರ್(ಎಸ್‌ಸಿ) (ಕೇರಳ): ರೆಮ್ಯಾ ಹರಿದಾಸ್
ತ್ರಿಶೂರ್ (ಕೇರಳ): ಕೆ ಮರಳೀಧರನ್
ಚಾಲಕ್ಕುಡಿ (ಕೇರಳ): ಬೆನ್ನಿ ಬಹನ್ನಾನ್
ಎರ್ನಾಕುಲಂ(ಕೇರಳ): ಹಿಬಿ ಇಡೆನ್
ಇಡುಕ್ಕಿ(ಕೇರಳ): ಡೀನ್ ಕುರಿಯಾಕೋಸ್
ಮಾವೇಲಿಕರ(ಎಸ್‌ಸಿ)(ಕೇರಳ): ಕೋಡಿಕುನ್ನಿಲ್ ಸುರೇಶ್
ಪಟ್ಟಣಂತಿಟ್ಟ(ಕೇರಳ): ಆ್ಯಂಟೋ ಆ್ಯಂಟೋನಿ
ಅತ್ತಿಂಗಲ್(ಕೇರಳ): ಅಡೂರ್ ಪ್ರಕಾಶ್
ಅಭ್ಯರ್ಥಿ ಕೊರತೆ ಇರುವ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಕಾಂಗ್ರೆಸ್ ಈಗ ಬಿಜೆಪಿ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸಲು ಮುಂದಾಗಿದೆ. ಅಲ್ಲಿ ಟಿಕೆಟ್ ವಂಚಿತರನ್ನು ಪಕ್ಷಕ್ಕೆ ಸೆಳೆಯುವ ಬಗ್ಗೆ ಯೋಚನೆ ಮಾಡಲಾಗಿದೆ. ಹೀಗಾಗಿ ಐದಾರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಕೊನೇ ಗಳಿಗೆಯಲ್ಲಿ ಘೋಷಣೆ ಮಾಡುವ ನಿರ್ಧಾರಕ್ಕೆ ಕಾಂಗ್ರೆಸ್ ಬಂದಿದೆ.