ಚಿತ್ರದುರ್ಗ : ಭದ್ರಾ ಮೇಲ್ದಂಡೆಗೆ ಹಣಕಾಸಿನ ಕೊರತೆಯಾದರೆ ಬ್ರಾಂಡ್ ಮೂಲಕ ಸಂಗ್ರಹಿಸಿ ಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ. ಈ ಯೋಜನೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರ ಸಂಪನ್ಮೂಲಗಳ ಕೊರತೆ ಎದುರಿಸುತ್ತಿದ್ದರೆ ಕೃಷ್ಣ ಜಲ ಭಾಗ್ಯ ಮಾದರಿಯಲ್ಲಿ ಭದ್ರ ಮೇಲ್ದಂಡೆ ಯೋಜನೆಯನ್ನು ಬಾಂಡ್ ಗಳ ಬಿಡುಗಡೆ ಮಾಡಿ. ಸಾರ್ವಜನಿಕ ವಲಯದಿಂದ ಸಂಪನ್ಮೂಲ ಕುರುಡೀಕರಣ ಮಾಡಿಕೊಂಡು ಯೋಜನೆಗೆ ಸಂಪೂರ್ಣ ಗೊಳಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಲಹೆ ಮಾಡಿದೆ.
ಈ ಸಂಬಂಧ ಶುಕ್ರವಾರ ಹೇಳಿಕೆ ನೀಡಿರುವ ಸಮಿತಿಯ ಕಾರ್ಯ ದಕ್ಷ ಬಿ.ಎ. ಲಿಂಗಾರೆಡ್ಡಿ, ಬೇರೆ ಕಡೆ ಸಾಲ ಮಾಡಿದರೆ ರಾಜ್ಯ ಸರ್ಕಾರ ಬಡ್ಡಿ ಕಟ್ಟಲೇಬೇಕು. ಬಾಂಡ್ ಬಿಡುಗಡೆ ಮಾಡಿದರೆ ಬಯಲುಸೇಮೆ ಜನ ಕೊಂಡ ಯೋಜನೆ ಸಾಕಾರಗೊಳಿಸಲು ಸಹಾಯಕವಾಗುತ್ತದೆ.
ಬಾಂಡ್ಕೊಳ್ಳುವ ಉದ್ಯಮಿಗಳು ಮುಂದೆ ಬರಬಹುದು ಈ ನಿಟ್ಟಿನಲ್ಲಿ ಸರ್ಕಾರ ಚಿಂತಿಸುವಂತೆ ಮನವಿ ಮಾಡಿದ್ದಾರೆ. ಹಬ್ಬಿ ನೋಡಲು ಭೂಸ್ವಾಧೀನ ಪ್ರಕ್ರಿಯೆ ಆಡಳಿತ ವ್ಯವಸ್ಥೆ ಲೋಪವಾಗಿದ್ದು ಸರಿಪಡಿಸಿಕೊಳ್ಳಲಾಗದೆ ಜನಪ್ರತಿನಿಧಿಗಳು ಹಾಗೂ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆಂದು ಹೆಮ್ಮೆ ಪಟ್ಟುಕೊಳ್ಳುತ್ತದೆ. ಬಾಕಿ ಉಳಿದ ಕಾಮಗಾರಿಗಳ ಕಡೆಗೆ ಗಮನಹರಿಸಬೇಕು.
ಮೊದಲ ಹಂತದಲ್ಲಿ ತುಂಗಾಭದ್ರ ನದಿಯಿಂದ ಭದ್ರಾ ಜಲಾಶಯಕ್ಕೆ 17.40 ಟಿಎಂಸಿ ನೀರನ್ನು ಲಿಫ್ಟ್ ಮಾಡುವ ಪ್ಯಾಕೇಜ್ ಒಂದರ ಕಾಮಗಾರಿ ಇಲಾಖೆ ದಾಖಲೆಗಳಲ್ಲಿ ನಾಲ್ಕಾರು ವರ್ಷಗಳಿಂದ ಪ್ರಗತಿಯಲ್ಲಿದೆ ಎಂದು ಆದರೆ ಪ್ರಗತಿ ಪ್ರಮಾಣದಲ್ಲಿ ಯಾವುದೇ ರೀತಿಯ ಬಗೆಹರಿಯುವ ರೀತಿ ಕಂಡು ಬಂದಿಲ್ಲ. ಅನುದಾನದ ಹಲಭ್ಯತೆಯಿಂದ ಕುಂಟು ತಾಸಾಗಿದೆ. ಪರಿಸರ ಮತ್ತು ಅರಣ್ಯ ಇಲಾಖೆ ಕ್ಲಿಯರೆನ್ಸ್ ಬಾಕಿ ಉಳಿದಿರುವುದರಿಂದ ಕಾಮಗಾರಿಗೆ ಚುರುಕುತನ ವೇಗ ನೀಡುವ ಸಾಧ್ಯವಾಗದೇ ಹೋಗಿರುವುದು ವಿಷಾದಕರ ಸಂಗತಿ.
ಭದ್ರಾ ಮೇಲ್ದಂಡೆ ಕಾಮಗಾರಿ ಇದೊಂದೇ ಉದ್ದೇಶ ಹೊಂದಿಲ್ಲವೆಂಬ ಸಂಗತಿ ಸರ್ಕಾರ ಹರಿಯಬೇಕು, ಚಿತ್ರದುರ್ಗ ಶಕ ಕಾಲುವೆ ನಿರ್ಮಾಣದ ಕಾಮಗಾರಿಯನ್ನು 1682 ಕೋಟಿ ರೂಪಾಯಿ ವೆಚ್ಚದಲ್ಲಿ 12 ಪ್ಯಾಕೇಜ್ ಗಳಲ್ಲಿ ಕೈಗೆತ್ತಿಕೊಳ್ಳಲಾಗಿದ್ದು ಎಲ್ಲವೂ ಅರೆಬರಿಯಾಗಿದೆ. ತುಮಕೂರು ಶಾಖಾ ಕಾಲುವೆಯನ್ನು 5 ಪ್ಯಾಕೇಜ್ ಗಳ ಕಾಮಗಾರಿಗಳ ಸರ್ವೆ ಕಾರ್ಯ ಬಾಕಿ ಇದೆ ಜಗಳೂರು ತಾಲೂಕಿನ 13200 ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಕಲ್ಪಿಸುವ ಹಾಗೂ 9 ಎಕರೆ ತುಂಬಿಸುವ 1568 ಕೋಟಿ ರೂಪಾಯಿ ವೆಚ್ಚದ ಎರಡು ಪ್ಯಾಕೇಜ್ ಗಳ ಕಾಮಗಾರಿ ಇನ್ನು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿಯೇ ಇಲ್ಲ.
ಚಳ್ಳಕೆರೆ ಮೊಳಕಾಲ್ಮೂರು ತಾಲ್ಲೂಕುಗಳ ಪರಿಸ್ಥಿತಿ ಹೆಚ್ಚು ಕಡಿಮೆ ಹಾಗೆಯೇ ಇದೆ ಭದ್ರ ಮೇಲ್ದಂಡೆಗೆ ಒಟ್ಟು 8,825 ಎಕ್ಟರ್ ಭೂಮಿ ಸ್ವಾಧೀನವಾಗಬೇಕಾಗಿದ್ದು,5786 ಎಕರೆ ಭೂಮಿ ಮಾತ್ರ ಇದುವರೆಗೂ ಸಾಧ್ಯವಾಗಿದೆ. 3038 ಎಕರೆ ಭೂಮಿ ಸ್ವಾಧೀನವಾಗ ಬೇಕಾಗಿದೆ. ಇನ್ನೂ 568 ಕೋಟಿ ರೂಪಾಯಿ ಬೇಕಾಗಿದೆ.
ಭೂ ಸ್ವಾಧೀನಕ್ಕೆ ಹಣಕಾಸು ಮುಟ್ಟುಗು ತೋರಿಸುವ ಸರ್ಕಾರ ನಿಗದಿತ ಅವಧಿಯಲ್ಲಿ ಯೋಜನೆಯನ್ನು ಮುಗಿಸುವ ಸಾಧ್ಯತೆಗಳು ಕ್ಷಮಿಸಿವೆ ಭದ್ರ ಮೇಲ್ದಂಡೆಗೆ ಇದುವರೆಗೂ 9112 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದ್ದು, 12351 ಕೋಟಿ ರೂಪಾಯಿ ಬೇಕಾಗಿದೆ. ರಾಜ್ಯ ಸರ್ಕಾರದ ಮೇಲೆ ಅನುದಾನ ಬಿಡುಗಡೆ ಗೊಬೆ ಕೂರಿಸುತ್ತಾ ತನ್ನ ಜವಾಬ್ದಾರಿ ಮರೆತಿದೆ. ಕೇಂದ್ರ ಸರ್ಕಾರ ೫೩ ಸಾವಿರ ಕೋಟಿ ರೂ ಕೊಟ್ಟರೆ 7,000 ಕೋಟಿ ರೂಪಾಯಿ ರಾಜ್ಯ ಸರ್ಕಾರ ಒದಗಿಸಬೇಕಾಗುತ್ತದೆ.
ತುಂಗಾ ನದಿಯ ಜಲಾವೃತ ಪ್ರದೇಶದಲ್ಲಿ 11 ಟವರ್ ಗಳ ಹೆಚ್.ಟಿ.ಲೈನ್ ನಿರ್ಮಾಣಕ್ಕಾಗಿ ಅರಣ್ಯ ಇಲಾಖೆ ತಿರವಳಿ ನೀಡಿಲ್ಲ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ರಾಜ್ಯ ಸರ್ಕಾರ ಭದ್ರಾ ಯೋಜನೆಯನ್ನು ಹಗುರವಾಗಿ ತೆಗೆದುಕೊಂಡಿದೆ. ಇಲಾಖೆಗಳ ನಡುವೆ ಸಮನ್ವಯ ಸಾಧಿಸದೆ ಲೋಪವೇಸಗಿದೆ. ಜಲಸಂಪನ್ಮೂಲ ಇಲಾಖೆ ಸಚಿವ ಡಿಕೆ ಶಿವಕುಮಾರ್ ತುರ್ತಾಗಿ ಇಲಾಖೆವಾರು ಸಮನ್ವಯ ಸಮಿತಿ ಸಭೆ ಕರೆದು ಭೂಸ್ವಾಧೀನ ಸೇರಿದಂತೆ ಅರಣ್ಯ ಇಲಾಖೆ ಇನ್ಸೂರೆನ್ಸ್ ಗಳನ್ನು ಪಡೆಯಬೇಕು ಎತ್ತಿನಹೊಳೆ ಯೋಜನೆಗೆ ರಾಜ್ಯ ಸರ್ಕಾರ ತೋರುವ ಆಸಕ್ತಿಯ ಭದ್ರಾ ಮೇಲ್ದಂಡೆ ಯೋಜನೆಗೊ ತೋರಿಸಲಿ ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯದರ್ಶಿ ಲಿಂಗಾರೆಡ್ಡಿ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.