ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಅಕ್ರಮ ಮಧ್ಯ ಸಾಗಾಣಿಕೆ ತಡೆ ಸೇರಿದಂತೆ ವಿವಿಧ ಅಕ್ರಮಗಳನ್ನು ತಡೆಗಟ್ಟುವ ನ್ಯಾಯ ಸಮ್ಮತ ಚುನಾವಣೆಗೆ ಸಹಕಾರ ನೀಡುವಂತೆ ನೆರೆಯ ಆಂಧ್ರಪ್ರದೇಶ ರಾಜ್ಯದ ಅನಂತಪುರ ಶ್ರೀ ಸತ್ಯ ಸಾಯಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ತಿಳಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಕೈಗೊಳ್ಳಬೇಕಾಗಿರುವ ಪ್ರಾಥಮಿಕ ಹಂತದ ಮುಂಜಾಗ್ರತ ಕಾರ್ಯಕ್ರಮಗಳನ್ನು ಕುರಿತು ನೆರೆಯ ತುಮಕೂರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಶ್ರೀ ಸತ್ಯಸಾಯಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿಗಳು, ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.
ಶೀಘ್ರದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದ್ದು ಈ ಸಂದರ್ಭದಲ್ಲಿ ಚುನಾವಣಾ ಸಂಬಂಧಿಸಿದ ಮತ್ತು ಜರುಗಬೇಕಾದ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾದ್ಯಂತ 35 ಚೆಕ್ಪೋಸ್ಟ್ಗಳನ್ನು ಸ್ಥಾಪಿಸುವುದು.
ಆಂಧ್ರಪ್ರದೇಶದೊಂದಿಗೆ ಜಿಲ್ಲೆಯ ಮೊಳಕಾಲ್ಮೂರು ಚಳ್ಕೆರೆ ಹಾಗೂ ಹಿರಿಯೂರು ತಾಲೂಕುಗಳ ವ್ಯಾಪ್ತಿಯಲ್ಲಿ ಸುಮಾರು 150 ಕಿಲೋ ಮೀಟರ್ ಗಡಿ ಪ್ರದೇಶ ಹಂಚಿಕೊಂಡಿದ್ದು ಚುನಾವಣಾ ಸಂದರ್ಭದಲ್ಲಿ ನೆರೆಯ ರಾಜ್ಯದಿಂದ ಈ ಜಿಲ್ಲೆಯ ಅಕ್ರಮವಾಗಿ ಮಧ್ಯ ವಿವಿಧ ಬಗೆಯ ಸಾಮಗ್ರಿಗಳ ಸಾಗಾಣಿಕೆ ಮಾಡುವುದು ಕೆಲ ವ್ಯಕ್ತಿಗಳು ಜಿಲ್ಲೆಯೊಳಗೆ ಆಗಮಿಸಿ ಚುನಾವಣೆಯ ಮೇಲೆ ಪ್ರಭಾವ ಬೀರುವಂತಹ ಸಾಧ್ಯತೆಗಳಿರುತ್ತವೆ.
ಹೀಗಾಗಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸುವ ಸಲುವಾಗಿ ಆಂಧ್ರದ ಗಡಿಯಲ್ಲಿರಿ ಬರುವ ಮೊಳಕಾಲ್ಮೂರು ತಾಲೂಕಿನ ಒಡೆವು, ಮಲಸಂದ್ರ ,ಯದ್ದಲಉಬಒಮ್ಮನಹಟ್ಟಿ , ಪಾತಪ್ಪನ ಗುಡಿ, ಕಣಪುಪ್ಪೆ, ತರಿಕೆರೆ ತಾಲೂಕಿನ ನಾಗಪ್ಪನಳ್ಳಿ ಗೇಟ್, ಹಿರಿಯೂರು ತಾಲೂಕಿನ ಕಂಡೆನಹಳ್ಳಿ ಹಾಗೂ ಪೀಡಿಕೋಟೆ ಕ್ರಾಸ್ ಸೇರಿದಂತೆ ಒಟ್ಟು ಎಂಟು ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿ, ತೀವ್ರಾ ನಿಗವಹಿಸಲಾಗುವುದು.
ಆಂಧ್ರಪ್ರದೇಶ ರಾಜ್ಯದ ವ್ಯಾಪ್ತಿಯಲ್ಲಿಯೂ ಅಧಿಕಾರಿಗಳು ಚೆಕ್ಪೋಸ್ಟ್ ಗಳನ್ನು ನಿರ್ಮಿಸಿ ಅಕ್ರಮವಾಗಿ ಅಲ್ಲಿಂದ ಮಧ್ಯ ಸಾಗಾಣಿಕೆಯಗದಂತೆ ಹಾಗೂ ಮತದಾರರಿಗೆ ಹಂಚಿಕೆ ಮಾಡುವ ಸಲುವಾಗಿ ವಿವಿಧ ಸಾಮಗ್ರಿಗಳನ್ನು ಸಾಗಿಸದಂತೆ ನಿಗವಹಿಸಬೇಕು.
ಚುನಾವಣಾ ಸಂದರ್ಭದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣೆಯ ಮೇಲೆ ಪ್ರಭಾವ ಬೀರದಂತೆ ಮಾಡುವ ವಿಶೇಷ ನಿಗ ವಹಿಸಲು ಹಲ್ಲಿನ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸಬೇಕು. ಆಂಧ್ರ ಗಡಿ ಪ್ರದೇಶದ ವ್ಯಾಪ್ತಿಯಲ್ಲಿನ ಮಧ್ಯದ ಅಂಗಡಿಗಳಲ್ಲಿ ಸರಾಸರಿಗಿಂತಲೂ ಹೆಚ್ಚಿನ ಮಧ್ಯದ ವಹಿವಾಟು ನಡೆಯದಂತೆ ನೋಡಿಕೊಳ್ಳಬೇಕು.
ಒಟ್ಟಾರೆ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ನೆರೆಯ ರಾಜ್ಯದ ಅಧಿಕಾರಿಗಳು ಇಲ್ಲಿನ ಆಡಳಿತದೊಂದಿಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಟೀ ವೆಂಕಟೇಶ್ ಅವರು ಕೋರಿದರು ಇದಕ್ಕೆ ಪ್ರತಿಯಾಗಿ ಸ್ಪಂದಿಸಿದ ಅನಂತಪುರ ಜಿಲ್ಲೆಯ ಕಲೆಕ್ಟರ್ ಗೌತಮಿ ಎಂ ಅವರು ಲೋಕಸಭಾ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸಲು ಚಿತ್ರದುರ್ಗ ಜಿಲ್ಲೆಯ ಗಡಿ ಹೊಂದಿಕೊಂಡವಂತೆ ಆಂಧ್ರದಲ್ಲಿಯೇ ಒಟ್ಟು 10 ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿ ಅಕ್ರಮ ಮತ್ತು ಮಧ್ಯ ಸಾಮಗ್ರಿಗಳ ಸಾಗಾಣಿಕೆ ತಡೆಗೆ ತೀರ್ವ ನಿಗವಹಿಸಲಾಗುವುದೆಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಜೆ ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ,ಉಪ ವಿಭಾಗ ಅಧಿಕಾರಿ ಕಾರ್ತಿಕ್, ಅಬಕಾರಿ ಉಪ ಆಯುಕ್ತ ಮಹದೇಶ್, ಶ್ರೀ ಸತ್ಯ ಸಾಯಿ ಜಿಲ್ಲೆಯ ಕಲೆಕ್ಟರ್ ,ಪಿ .ಅರುಣ್ ಬಾಬು ಸೇರಿದಂತೆ ವಿವಿಧ ಅಧಿಕಾರಿಗಳು ,ಅನಂತಪುರಂ ಶ್ರೀ ಸತ್ಯ ಸಾಯಿ ಜಿಲ್ಲಾಧಿಕಾರಿಗಳ, ಪೊಲೀಸ್ ಅಧೀಕ್ಷಕರು, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು , ಅಬಕಾರಿ ಇಲಾಖೆ ಅಧಿಕಾರಿಗಳು , ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಸಮವಾದದಲ್ಲಿ ಪಾಲ್ಗೊಂಡಿದ್ದರು.