Breaking
Mon. Dec 23rd, 2024

ಭೋಪಾಲ್ನಲ್ಲಿರುವ  ರಾಜ್ಯ ಸಚಿವಾಲಯದಲ್ಲಿ  ಶನಿವಾರ ಭಾರೀ ಅಗ್ನಿ ಅವಘಡ

ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ನಲ್ಲಿರುವ  ರಾಜ್ಯ ಸಚಿವಾಲಯದಲ್ಲಿ  ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಚಿವಾಲಯ ಕಟ್ಟಡ ವಲ್ಲಭ ಭವನದಲ್ಲಿ  ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸಲು ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ವೇಗವಾಗಿ ಹರಡಿದ್ದಲ್ಲದೆ, ದಟ್ಟವಾದ ಹೊಗೆ ಆವರಿಸಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.

ಭೋಪಾಲ್‌ನ ವಲ್ಲಭ ಭವನದ ರಾಜ್ಯ ಸಚಿವಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿದ ಕುರಿತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಪ್ರತಿಕ್ರಿಯಸಿದ್ದು, ಭವನದ ಹಳೆಯ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬುದು ಸದ್ಯದ ಮಾಹಿತಿಯಿಂದ ದೃಢಪಟ್ಟಿದೆ. ಜಿಲ್ಲಾಧಿಕಾರಿಯಿಂದ ಮಾಹಿತಿ ಸ್ವೀಕರಿಸಲಾಗಿದ್ದು, ಅದನ್ನು ಮೇಲ್ವಿಚಾರಣೆ ಮಾಡಲು ಸಿಎಸ್‌ಗೆ ಸೂಚಿಸಿದ್ದೇನೆ ಎಂದಿದ್ದಾರೆ.

ಘಟನೆಯ ಬಗ್ಗೆ ವಿವರವಾದ ಮಾಹಿತಿಯನ್ನು ಸಂಗ್ರಹಿಸಲು ಪ್ರಯತ್ನಿಸಲಾಗುತ್ತಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂಬ ಮಾಹಿತಿ ದೊರೆತಿದೆ. ಅಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು ನಾವು ನಿರ್ದೇಶನಗಳನ್ನು ನೀಡಿದ್ದೇವೆ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸಬಾರದು, ಅದಕ್ಕಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸದ್ಯ 5 ಮಂದಿ ಕಟ್ಟಡದ ಒಳಗೆ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ, ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಸದ್ಯ ಪೊಲೀಸರು ಕಟ್ಟಡದ ಸುತ್ತಮುತ್ತಲಿನ ಜನರನ್ನು ರಕ್ಷಿಸಿದ್ದು, ಒಳಗೆ ಸಿಲುಕಿದ್ದಾರೆ ಎನ್ನಲಾದವರ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.

 

Related Post

Leave a Reply

Your email address will not be published. Required fields are marked *