ಹೊಸದುರ್ಗ : ರಾಜ್ಯ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಆವಿಷ್ಕಾರ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಶಾಲಾ ಹಂತದಿಂದ ರಾಜ್ಯ ಮಟ್ಟದವರೆಗೂ ನಡೆಯುವ ರಸಪ್ರಶ್ನೆ ಕಾರ್ಯಕ್ರಮದ ಜೂನಿಯರ್ ವಿಭಾಗದಲ್ಲಿ ಕೊಡಿಸುವುದು ನಾಗರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6 ನೇ ತರಗತಿ ಓದುತ್ತಿರುವ ಕುಮಾರಿ ಕವನ ಕೆ ಎಸ್ ಬೆಂಗಳೂರಿನಲ್ಲಿ ನಡೆದ ವಿಭಾಗ ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ತಾಲೂಕಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ರಾಷ್ಟ್ರೀಯ ಆವಿಷ್ಕಾರ ಅಭಿಯಾನ ಕಾರ್ಯಕ್ರಮದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಕವನ ತಾಲೂಕು ಮಟ್ಟದ ಆನ್ಲೈನ್ ರಸಪ್ರಶ್ನೆ ಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಮುಖ ಮುಖಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ದಿವ್ಯ ಸ್ಥಾನ ಪಡೆದ ಕವನ ಗ್ರಾಮೀಣ ವಿಭಾಗದ ಸರ್ಕಾರಿ ಶಾಲಾ ಮಕ್ಕಳಿಗೆ ನಿಜವಾದ ಅರ್ಥದಲ್ಲಿ ಸ್ಪೂರ್ತಿಯಾಗಿದ್ದಾಳೆ . ಇವಳ ಸಾಧನೆಗೆ ಹೊಸದುರ್ಗ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲಾ ಸಿಬ್ಬಂದಿ ವರ್ಗ ಎಸ್ .ಡಿ.ಎಂ.ಸಿ. ಗ್ರಾಮ ಪಂಚಾಯಿತಿ ಹುಂಚ ಪೋಷಕರು ಅಡುಗೆ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದರು.
ಕವನ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ 3000 ಜಿಲ್ಲಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ 5000 ರೂಪಾಯಿ ಹಾಗೂ ವಿಭಾಗ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ 5000 ನಗದು ಬಹುಮಾನವಾಗಿ ಗಳಿಸಿರುವುದು ಒಟ್ಟು ಬಹುಮಾನಗಳ ಮೊತ್ತ 13,000 ರೂಪಾಯಿಗಳನ್ನು ಗೆದ್ದಿದ್ದಾರೆ.