ಚಿತ್ರದುರ್ಗ ಲೋಕಸಭಾ ಚುನಾವಣೆ ಸಮೀಪಸುತ್ತಿದ್ದಂತೆ ಟಿಕೆಟ್ ಆಕಾಂಕ್ಷೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕೋಟೆ ನಾಡು ಚಿತ್ರದುರ್ಗದಲ್ಲಿ ಸ್ಥಳೀಯ ಕೂಗು ಹೆಚ್ಚಾಗಿ ಕಾಣುತ್ತಿದೆ. ಚಿತ್ರದುರ್ಗದ ನಿವಾಸಿಗಳಾದ ಜೆಜೆ ಹಟ್ಟಿ ತಿಪ್ಪೇಸ್ವಾಮಿಯವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಲು ಸ್ಥಳೀಯ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜೆಜೆ ಹಟ್ಟಿ ತಿಪ್ಪೇಸ್ವಾಮಿ ಅಭಿಮಾನಿಗಳ ಬಳಗದ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂಕೆತ್ ಪಿ ರವರಿಗೆ ಮನವಿ ಸಲಿಕೆ ಮಾಡಿದ್ದಾರೆ ಹಾಗೂ ಕಾಂಗ್ರೆಸ್ ಪಕ್ಷದ ಡಿ.ಕೆ. ಶಿವಕುಮಾರ್ ಮತ್ತು ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಜೆ ಹಟ್ಟಿ ತಿಪ್ಪೇಸ್ವಾಮಿಯವರ ಭಾವಚಿತ್ರಗಳನ್ನು ಕೈಯಲ್ಲಿ ನಡೆಸಿ ತಿಪ್ಪೆಸ್ವಾಮಿಯವರ ಪರವಾಗಿ ಘೋಷಣೆ ಕೂಗಿ ಟಿಕೆಟ್ ಕೊಡುವಂತೆ ಆಗ್ರಹಿಸಿದರು.
ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಸ್ಪೀರ್ ಅವರಿಗೆ ಮನವಿ ಸಲ್ಲಿಸಿದ್ದು ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರು ಈ ಬಾರಿ ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡದಿದ್ದರೆ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಗೆಲುವು ಸಾಧಿಸಿದಾಗ ತಿಳಿಸಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಹೊರ ಜಿಲ್ಲೆಯವರೆಗೆ ಪಕ್ಷ ಟಿಕೆಟ್ ನೀಡಿದ್ದು ಈ ಬಾರಿ ಸ್ಥಳೀಯ ಸ್ಪರ್ಧೆ ಆಕಾಂಕ್ಷಿಯಾದ ಡಾ.ಬಿ. ತಿಪ್ಪೇಸ್ವಾಮಿ ಜೆಜೆ ಹಟ್ಟಿ ಅವರಿಗೆ ಟಿಕೆಟ್ ಕೊಡಿಸಲು ಜಿಲ್ಲಾಧ್ಯಕ್ಷರು ಜಿಲ್ಲೆಯ ಜನಪರ ವಾಗಿ ವಿಶೇಷ ಗಮನಹರಿಸಿ ನಮ್ಮ ಮನವಿಯನ್ನು ಸಲ್ಲಿಸಬೇಕು ಈ ಹಿಂದೆ 2009ರಲ್ಲಿ ತಿಪ್ಪೇಸಮಿಯವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಧಿತರಾಗಿದ್ದರು. ಅಲ್ಲಿಂದ ಇಲ್ಲಿಯವರೆಗೆ ತಿಪ್ಪೇಸ್ವಾಮಿ ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾರೆ ವಿದ್ಯಾರ್ಥಿ ಕಾಂಗ್ರೆಸ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅನೇಕ ಜನಪರ ಹೋರಾಟ ಮಾಡಿದ್ದಾರೆ ಪಕ್ಷದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದಾರೆ.
ಚಿತ್ರದುರ್ಗದಲ್ಲಿ ಮತದಾರರು ಸ್ಥಳೀಯ ನಾಯಕರ ಆಯ್ಕೆಯಲ್ಲಿ ಬಹಳ ನಿರೀಕ್ಷೆ ಇಟ್ಟಿದ್ದು ಅವರ ಆಶಯಗಳಿಗೆ ಮಾನ್ಯತೆ ನೀಡಿ ಸ್ಥಳೀಯ ನಾಯಕರಿಗೆ ಟಿಕೆಟ್ ಕೊಡಬೇಕು ಕಳೆದ ಅನೇಕ ವರ್ಷಗಳಿಂದ ನಾಯಕತ್ವದ ಆಂದೋಲನ ನಡೆಯುತ್ತಿದ್ದು ಈ ಬಾರಿ ಸ್ಥಳೀಯರಿಗೆ ಟಿಕೆಟ್ ಕೊಟ್ಟು ಈ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಮನವಿ ಮಾಡಲಾಯಿತು.